ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ

ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನ್ನೆ (ಮಾ.29) ಮಧ್ಯಾಹ್ನದ ವೇಳೆ ತಾಯಿ-ಮಗು ನಾಪತ್ತೆಯಾಗಿದ್ದರು. ಈ ಹಿನ್ನಲೆ ಸಂಬಂಧಿಕರು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಇದೀಗ ಮೃತದೇಹ ಪತ್ತೆಯಾಗಿದೆ.

ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ
ಮೃತ ಮಗು-ಮಹಿಳೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 30, 2024 | 4:13 PM

ದಕ್ಷಿಣ ಕನ್ನಡ, ಮಾ.30: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ರ್ದುದೈವಿಗಳು. ಇಬ್ಬರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬ ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದ ಚೈತ್ರ. ನಿನ್ನೆ (ಮಾ.29) ಮಧ್ಯಾಹ್ನದ ವೇಳೆ ತಾಯಿ-ಮಗು ನಾಪತ್ತೆಯಾಗಿದ್ದರು. ಈ ಹಿನ್ನಲೆ ಸಂಬಂಧಿಕರು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಇದೀಗ ಮೃತದೇಹ ಪತ್ತೆಯಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿಯಲ್ಲಿ ಮಹಿಳಾ ಕಾನ್ಸ್​ಟೇಬಲ್ ಆತ್ಮಹತ್ಯೆ

ಉಡುಪಿ: ಜಿಲ್ಲೆಯ ಕಾಪು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್​ ಪೇದೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿಯೇ ನೇಣಿಗೆ  ಶರಣಾದ ಘಟನೆ ನಡೆದಿದೆ. ಜ್ಯೋತಿ ಮೃತ ರ್ದುದೈವಿ. ಇವರು ಬಾಗಲಕೋಟೆ ಮೂಲದವರಾಗಿದ್ದು, ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ದಿಢೀರ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಶಂಕೆ ವ್ಯಕ್ತಿಯಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಐವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾಯಿಯೂ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

ಸೀಬೆಹಣ್ಣಿನ ತೋಟಕ್ಕೆ ಬೆಂಕಿ

ಕೋಲಾರ: ಬಂಗಾರಪೇಟೆ ತಾಲೂಕಿನ ಚಿಕ್ಕಹೊಲಗಮಾದಿ ಗ್ರಾಮದಲ್ಲಿ ಸೀಬೆ ಹಣ್ಣಿನ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ. ಇದು ಮಾಜಿ ಶಾಸಕ ನಂದೀಶ್​​ ರೆಡ್ಡಿಗೆ ಸೇರಿದ ಸೀಬೆ ತೋಟ ಆಗಿದ್ದು, ಕರೆ ಮಾಡಿದರೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಾರದ ಹಿನ್ನಲೆ ಬೆಂಕಿ ನಂದಿಸಲು ಸ್ಥಳೀಯರೇ ಹರಸಾಹಸ ಪಡುವಂತಾಗಿದೆ. ಈ ಕುರಿತು ಬಂಗಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Sat, 30 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us