ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಸುಹಾಸ್ ಶೆಟ್ಟಿ ಹತ್ಯೆ ಸಂಬಂಧ ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪಗಳನ್ನು ಮಾಡಿದೆ. 50 ಲಕ್ಷ ರೂಪಾಯಿಗೂ ಅಧಿಕ ಫಂಡ್‌ನಿಂದ ನಡೆದ ಈ ಕೃತ್ಯದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಶೀದ್ ಅವರ ಪಾತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಕೈವಾಡದ ಅನುಮಾನವಿದ್ದು, ಪ್ರಕರಣದ ತನಿಖೆಗೆ ಎನ್‌ಐಎ ಹಸ್ತಕ್ಷೇಪ ಅಗತ್ಯ ಎಂದು ವೇದಿಕೆ ಒತ್ತಾಯಿಸಿದೆ.

ಸುಹಾಸ್ ಹತ್ಯೆಗೆ 50 ಲಕ್ಷಕ್ಕೂ ಹೆಚ್ಚು ಫಂಡ್, ಬಜ್ಪೆ ಹೆಡ್ ಕಾನ್ಸ್‌ಟೇಬಲ್ ಕುತಂತ್ರ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ
ಹಿಂದೂ ಜಾಗರಣ ವೇದಿಕೆ ಲೋಗೊ ಮತ್ತು ಸುಹಾಸ್ ಶೆಟ್ಟಿ
Edited By:

Updated on: May 05, 2025 | 2:29 PM

ಮಂಗಳೂರು, ಮೇ 5: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  (Suhas Shetty) ಕೊಲೆ ಪ್ರಕರಣ ಸಂಬಂಧ ಹಿಂದೂ ಜಾಗರಣ ವೇದಿಕೆ (Hindu Jagaran Vedike) ಗಂಭೀರ ಆರೋಪ ಮಾಡಿದೆ. ಕೊಲೆಯ ಹಿಂದೆ ಕಾಣದ ಕೈಗಳ ಕುತಂತ್ರ ಇದೆ. 50 ಲಕ್ಷ ರೂಪಾಯಿಗೂ ಹೆಚ್ಚು ಫಂಡ್ ಮಾಡಲಾಗಿದೆ. ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಕೂಡ ಕೃತ್ಯದಲ್ಲಿ ಪರೋಕ್ಷವಾಗಿ ಕೈಜೋಡಿಸಿದ ಅನುಮಾನವಿದೆ ಎಂದು ಹಿಂದೂ ಜಾಗರಣ ವೇದಿಕೆಯ ಮುಖಂಡ ಕೆಟಿ ಉಲ್ಲಾಸ್ ಆರೋಪ ಮಾಡಿದ್ದಾರೆ.

ಸುಹಾಸ್ ಕೊಲೆ ಸಂಬಂಧ ಬಂಧನವಾಗಿರುವ ಆರೋಪಿಗಳು ನೈಜ ಆರೋಪಿಗಳು ಹೌದೇ ಎಂಬ ಬಗ್ಗೆ ಸುಹಾಸ್ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಸಂಬಂಧ ನಮಗೂ ಒಂದಿಷ್ಟು ಅನುಮಾನಗಳಿವೆ. ಈ ಹತ್ಯೆ ಫಾಜಿಲ್ ಕೊಲೆಗೆ ಪ್ರತೀಕಾರ ಎಂದು ಪೊಲೀಸ್ ಇಲಾಖೆ ಹೇಳಿದೆ. ಆದರೆ, ಈ ಪ್ರಕರಣದ ಹಿಂದೆ ಕೇವಲ ಫಾಜಿಲ್ ತಮ್ಮ ಮಾತ್ರ ಇಲ್ಲ. ದೊಡ್ಡ ಶಕ್ತಿಯೊಂದು ಇದಕ್ಕೆ 50 ಲಕ್ಷ ರೂಪಾಯಿಗೂ ಹೆಚ್ಚು ಫಂಡ್ ಮಾಡಿರುವ ಅನುಮಾನ ಇದೆ. ನಿಷೇಧಿತ ಪಿಎಫ್​​ಐ ಸಂಘಟನೆ ಮೇಲೆ ಅನುಮಾನ ಇದೆ. ಈ ಹಿಂದೆ ಮಾಡುತ್ತಿದ್ದ ಟಾರ್ಗೆಟ್ ಕಿಲ್ಲಿಂಗ್ ಈ ಕೇಸ್​ನಲ್ಲೂ ಗೋಚರಿಸುತ್ತಿದೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ.

ಪಿಎಫ್​​ಐ ಕೈವಾಡದ ಬಗ್ಗೆ ಕೆಟಿ ಉಲ್ಲಾಸ್ ಹೇಳೋದೇನು?

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಮೊದಲು ಸಾಮಾನ್ಯ ಮುಸ್ಲಿಂ ಒಬ್ಬನ ಹತ್ಯೆಯಾಗಿತ್ತು. ಇದೀಗ ಅಶ್ರಫ್ ಕೊಲೆ ನಡೆದ ಬೆನ್ನಲ್ಲೇ ಸುಹಾಸ್ ಹತ್ಯೆಯಾಗಿದೆ‌. ಇಲ್ಲಿ ಪಿಎಫ್​​​ಐ ಮಾಡೆಲ್ ಕೆಲಸ ಮಾಡುತ್ತಿದೆ. ಹತ್ಯೆ ನಡೆಸಿ ಕಾರನ್ನೇರಿ ಹೋಗುವಾಗ ಅವಸರ ಕಂಡುಬರುತ್ತಿರಲಿಲ್ಲ. ಉಲ್ಲಾಸ್ ಸಾಯುತ್ತಾನೆ ಎಂದು ಖಾತ್ರಿ ಆದ ಬಳಿಕ ಆರಾಮವಾಗಿ ಹೋಗಿದ್ದಾರೆ. ಅಲ್ಲಿ ನೆರೆದವರೆಲ್ಲ ಇವರ ಜನರೇ ಆಗಿರಬೇಕು. ಪಹಲ್ಗಾಮ್​​ನಲ್ಲಿ ಸ್ಥಳೀಯರ ಕೈವಾಡ ಇದ್ದಂತೆಯೇ ಇಲ್ಲಿಯೂ ಸ್ಥಳೀಯರು ಸಹಕರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಬುರ್ಖಧಾರಿ ಮಹಿಳೆಯರು ಸಹಾಯ ಮಾಡಿದ್ದಾರೆ. ಅಲ್ಲಿ ಇದ್ದವರಿಗೆಲ್ಲಾ ಈ ಘಟನೆ ಆಗುತ್ತದೆ ಎಂಬುದು ಎಂದು ಮೊದಲೇ ಗೊತ್ತಿದ್ದಂತೆ ಕಾಣಿಸುತ್ತಿದೆ. ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಗಳಾದ ಮುಸ್ತಫಾ, ಕಬೀರ್ ಅಲ್ಲಿ ಇದ್ದರು ಎಂಬ ಮಾಹಿತಿ ಇದೆ. ಸುಖಾನಂದ ಶೆಟ್ಟಿ ಹತ್ಯೆ ಮಾಡಿದ ಆರೋಪಿ ಈ ಹತ್ಯೆಗೆ ಫಂಡಿಂಗ್ ಮಾಡಿರುವ ಅನುಮಾನವಿದೆ. ಪ್ರಕರಣದ ಪ್ರಮುಖ ಆರೋಪಿ ಸಫ್ವಾನ್ ಬಾಡಿಗೆಯಿದ್ದ ಮನೆ ಪಿಎಫ್​ಐ ಕಾರ್ಯಕರ್ತನದ್ದಾಗಿದೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ.

ಇದನ್ನೂ ಓದಿ
ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ
ಸುಹಾಸ್ ಶೆಟ್ಟಿ ಕೊಲೆ: ಇಲ್ಲಿದೆ ಆರೋಪಿಗಳ ಪ್ಲ್ಯಾನ್​​ನ ಇನ್​ಸೈಡ್ ಡಿಟೇಲ್ಸ್
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?

ಬಜ್ಪೆ ಹೆಡ್​​​ಕಾನ್ಸ್​ಟೇಬಲ್ ರಶೀದ್ ವಿರುದ್ಧ ಗಂಭೀರ ಆರೋಪ

ಮಂಗಳೂರಿನ ಬಜ್ಪೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಈ ಕೃತ್ಯದ ಹಿಂದೆ ಇರುವ ಅನುಮಾನವಿದೆ. ಸುಹಾಸ್ ಶೆಟ್ಟಿ ಸ್ನೇಹಿತರು ಆ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಕೆಟಿ ಉಲ್ಲಾಸ್ ಹೇಳಿದ್ದಾರೆ. ಸುಹಾಸ್ ಶೆಟ್ಟಿಗೆ ರಶೀದ್ ಬಹಳಷ್ಟು ಟಾರ್ಚರ್ ಕೊಡುತ್ತಿದ್ದರು. ಮೂರು ದಿನದ ಹಿಂದಷ್ಟೇ ಶಸ್ತ್ರಾಸ್ತ್ರ ತೆಗೆಸಿದ್ದರು. ಆ ಸುದ್ದಿ ಆರೋಪಿಗಳಿಗೆ ಹೇಗೆ ಗೊತ್ತಾಯಿತು? ಬಲವಾದ ಮಾಹಿತಿಯನ್ನು ರಶೀದ್ ಆರೋಪಿಗಳಿಗೆ ನೀಡಿರಬೇಕು. ರಶೀದ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಉಲ್ಲಾಸ್ ಆಗ್ರಹಿಸಿದ್ದಾರೆ.

ರಂಜಿತ್ ಮತ್ತು ನಾಗರಾಜ್ ಅವರನ್ನು ಈ ಪ್ರಕರಣದಲ್ಲಿ ಸೇರಿಸಿದ್ದಾರೆ. ಸುಹಾಸ್​​ಗೂ ಇವರಿಗೂ ಯಾವುದೇ ಸಂಬಂಧವಿಲ್ಲ. ಕ್ರಿಮಿನಲ್ ಚಟುವಟಿಕೆಯಲ್ಲಿ ಇವರು ಭಾಗವಹಿಸಿದ ನಿದರ್ಶನ ಇಲ್ಲ. ಸುಳ್ಳು ಹೇಳಿ ಅವರನ್ನು ಕರೆಸಿರುವ ಸಾಧ್ಯತೆಯಿದೆ. ಹಿಂದುಗಳು ಇದ್ದಾರೆ ಎಂದು ತೋರಿಸಲು ಅವರನ್ನು ಕರೆಸಿರುವ ಸಾಧ್ಯತೆಯಿದೆ. ಪಿಎಫ್​ಐ ಬ್ಯಾನ್ ಬಳಿಕ ಹಿಂದೂಗಳ ಜೊತೆ ಸೇರಿ ಈ ರೀತಿ ಹತ್ಯೆ ಮಾಡುತ್ತಾರೆ ಎಂಬ ಮಾಹಿತಿ ಇತ್ತು. ಎನ್​ಐಎಗೆ ಈ ಪ್ರಕರಣಗಳು ಹೋಗಬಾರದೆಂದು ಈ ರೀತಿ ಮಾಡುವ ಅನುಮಾನವಿದೆ. ಇದು ಕೇವಲ ಪಾಜಿಲ್ ಹತ್ಯೆಗೆ ಪ್ರತಿಕಾರ ಅಲ್ಲ. ಇದು ನಿಷೇಧಿತ ಪಿಎಫ್​​ಐ ಸಂಘಟನೆಯ ಸಂಚಿನ ಭಾಗ‌.ಎನ್​ಐ ತನಿಖೆ ಆಗಬೇಕು. ಕರ್ನಾಟಕ ಸರ್ಕಾರದ ತನಿಖೆ, ಗೃಹಸಚಿವರ ಶ್ರದ್ಧೆ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ ಸಂದಾಯವಾಗಿರುವ ಶಂಕೆ: ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾದ ಮಂಗಳೂರು ಪೊಲೀಸರು

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್​ಐ ನೇರ ಕೈವಾಡವಿದೆ ಎಂದ ವಿ‌ಎಚ್​ಪಿ ಮುಖಂಡ ಶರಣ್ ಪಂಪ್ವೆಲ್ ಕೂಡ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಈ ಹಿಂದೆ ನಡೆದ ಹಿಂದೂ ನಾಯಕರ ಹತ್ಯೆಗೂ ಇದಕ್ಕೂ ಸಾಮ್ಯತೆ ಇದೆ. ತರಬೇತಿ ಪಡೆದುಕೊಂಡು ಈ ಹತ್ಯೆ ಮಾಡಿದ್ದಾರೆ. ಆರೋಪಿ ಸಫ್ವಾನ್ ಪಿಎಎಫ್​​​ಐ ಕಾರ್ಯಕರ್ತನ ಮನೆಯಲ್ಲಿದ್ದ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Mon, 5 May 25

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us