ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್

ನಿನ್ನೆ ನಡೆದ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಉಮನಾಥ್ ಕೋಟ್ಯಾನ್ ಅವರು, ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಎಂದಿದ್ದಾರೆ.

ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್
ಶಾಸಕ ಉಮಾನಾಥ್ ಕೋಟ್ಯಾನ್
Edited By: ಆಯೇಷಾ ಬಾನು

Updated on: Mar 11, 2024 | 1:17 PM

ಮಂಗಳೂರು, ಮಾರ್ಚ್​.11: ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ ಭರ್ಜರಿ ತಯಾರಿ ಶುರು ಮಾಡಿದೆ. ಕರ್ನಾಟಕದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿ ನಾನಾ ತಂತ್ರಗಳನ್ನು ಹೆಣೆಯುತ್ತಿದೆ. ಇಂತಹ ಸಮಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ (Umanath Kotian) ಅವರು ಕಾಂಗ್ರೆಸ್​ನ ರಕ್ಷಿತ್ ಶಿವರಾಂ (Rakshit Shivaram) ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಬೆಳ್ತಂಗಡಿ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲಿನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ಹೊರ ಹಾಕಿದ್ದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತನ್ನ ಸಮಾಜದ ಕಾಂಗ್ರೆಸ್ ನಾಯಕ ಸೋತ ಕಾರಣಕ್ಕೆ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

ಇದನ್ನೂ ಓದಿ:ಕರ್ನಾಟಕದಿಂದ ಸ್ಪರ್ಧಿಸಲಿರುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದು ಅಂತಿಮಗೊಳ್ಳಬಹುದು: ಬಿಎಸ್ ಯಡಿಯೂರಪ್ಪ

ಮಾರ್ಚ್.10ರಂದು ನಡೆದ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಭಾಗಿಯಾಗಿದ್ದ ಉಮನಾಥ್ ಕೋಟ್ಯಾನ್ ಅವರು, ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳಿಗೆ ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಎಂಬ ರೀತಿಯಲ್ಲಿ ಕರೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ಬಿಲ್ಲವ ಅಭ್ಯರ್ಥಿ ರಕ್ಷಿತ್ ಶಿವರಾಂ ಚುನಾವಣೆ ಎದುರಿಸಿ ಸೋತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಹು ಸಂಖ್ಯಾತ ಬಿಲ್ಲವರೇ ಇರುವಾಗ ರಕ್ಷಿತ್ ಯಾಕೆ ಸೋತಿದ್ದಾರೆ? ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ.ಕಾಂಗ್ರೆಸ್​ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ತೊಂದರೆಯಾಗುತ್ತೆ ಎಂಬ ಭಯ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಅದ್ಯಾಕೆ ಬಿಲ್ಲವ ಸಮಾಜದವರಿಗೆ ಈ ಹಿಂಜರಿಕೆ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಕರೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us