Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಿಸಿಎಂ ಹಾಸ್ಟೆಲ್​ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣು

Mangalore News: ಕುರುಂಜಿಬಾಗ್ ನಲ್ಲಿ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನ್ಯಾ (17) ನೇಣಿಗೆ ಶರಣಾಗಿದ್ದಾಳೆ.

ಮಂಗಳೂರು ಬಿಸಿಎಂ ಹಾಸ್ಟೆಲ್​ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 27, 2022 | 3:09 PM

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುರುಂಜಿಬಾಗ್ ನಲ್ಲಿ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನ್ಯಾ (17) ನೇಣಿಗೆ ಶರಣಾಗಿದ್ದಾಳೆ. ನಿನ್ನೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್​ಪೆಕ್ಟರ್ ಸಾವು

ಬೆಂಗಳೂರಿನ ಸ್ಯಾಂಕಿಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಹೆಲ್ತ್ ಇನ್ಸ್​ಪೆಕ್ಟರ್ ಪ್ರಶಾಂತ್ ನಾಯ್ಕ್(27) ಮೃತಪಟ್ಟಿದ್ದಾರೆ. ಫುಟ್​ಪಾತ್​ಗೆ ಬೈಕ್ ಡಿಕ್ಕಿಯಾಗಿ ಪ್ರಶಾಂತ್ ತಲೆಗೆ ಪೆಟ್ಟಾಗಿತ್ತು. ಜೆ.ಪಿ.ನಗರ ನಿವಾಸಿಯಾಗಿರುವ ಮೃತ ಪ್ರಶಾಂತ್ ನಾಯ್ಕ್, ಸದಾಶಿವನಗರದಿಂದ ತಮ್ಮ ನಿವಾಸಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ. ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ

ಬೆಂಗಳೂರಿನ ಹೆಚ್​ಎಸ್​ಆರ್ ಲೇಔಟ್ ಸಂಚಾರಿ ಠಾಣಾ ವ್ಯಾಪ್ತಿಯ ಇಬ್ಬಲೂರು ಬ್ರಿಡ್ಜ್ ಬಳಿ ಅತಿವೇಗವಾಗಿ ಬಂದು ಅಪಘಾತವಾಗಿ ಸ್ಥಳದಲ್ಲೇ ಬೈಕ್ ಸವಾರ ಸಂತೋಷ್ ಹೋಂಗಲ್ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: Datta Peetha: ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್ ಮುತಾಲಿಕ್

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಸಾವು

ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಗ್ರಾಮದ ಬಳಿ ಮೇಕೆ ಮೇಯಿಸಲು ಹೋಗಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವೆಂಕಟಲಕ್ಷ್ಮಮ್ಮ(55) ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು

ಮೈಸೂರು: ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ‌ ಮಾಡುವಾಗ ಕುಸಿದು ಬಿದ್ದು ಮೈಸೂರು ಮೂಲದ ಯುವಕ ಮೃತಪಟ್ಟಿದ್ದಾನೆ. ಮೈಸೂರಿನ ಸಿದ್ದಾರ್ಥ ನಗರದ ನಿವಾಸಿ ಪ್ರೀತಂ(35) ಮೃತ ದುರ್ದೈವಿ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಕನಕಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೀತಂ ಮೃತಪಟ್ಟಿದ್ದಾನೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಮ್ ತರಲು ಹೋದ ಮಹಿಳೆ ನಾಪತ್ತೆ

ಸಿಮ್ ತರಲು ಹೋದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿ ಪ್ರಿಯಾ(37) ಡಿ.22 ರಂದು ನಾಪತ್ತೆ‌ಯಾಗಿದ್ದಾರೆ. ಪ್ರಿಯಾ ಕಂಡು ಬಂದರೆ ಠಾಣೆಗೆ, 9480805370 ಗೆ ಮಾಹಿತಿ ನೀಡುವಂತೆ ಬೆಳ್ತಂಗಡಿ ಠಾಣೆಯಿಂದ ಪ್ರಕಟಣೆ‌ ಹೊರಡಿಸಲಾಗಿದೆ.

ಪ್ರಿಯಾ

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:42 pm, Tue, 27 December 22

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ