ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುರುಂಜಿಬಾಗ್ ನಲ್ಲಿ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನ್ಯಾ (17) ನೇಣಿಗೆ ಶರಣಾಗಿದ್ದಾಳೆ. ನಿನ್ನೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಸ್ಯಾಂಕಿಕೆರೆಯ ಟಿ.ಚೌಡಯ್ಯ ರಸ್ತೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಹೆಲ್ತ್ ಇನ್ಸ್ಪೆಕ್ಟರ್ ಪ್ರಶಾಂತ್ ನಾಯ್ಕ್(27) ಮೃತಪಟ್ಟಿದ್ದಾರೆ. ಫುಟ್ಪಾತ್ಗೆ ಬೈಕ್ ಡಿಕ್ಕಿಯಾಗಿ ಪ್ರಶಾಂತ್ ತಲೆಗೆ ಪೆಟ್ಟಾಗಿತ್ತು. ಜೆ.ಪಿ.ನಗರ ನಿವಾಸಿಯಾಗಿರುವ ಮೃತ ಪ್ರಶಾಂತ್ ನಾಯ್ಕ್, ಸದಾಶಿವನಗರದಿಂದ ತಮ್ಮ ನಿವಾಸಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ. ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಸಂಚಾರಿ ಠಾಣಾ ವ್ಯಾಪ್ತಿಯ ಇಬ್ಬಲೂರು ಬ್ರಿಡ್ಜ್ ಬಳಿ ಅತಿವೇಗವಾಗಿ ಬಂದು ಅಪಘಾತವಾಗಿ ಸ್ಥಳದಲ್ಲೇ ಬೈಕ್ ಸವಾರ ಸಂತೋಷ್ ಹೋಂಗಲ್ ಮೃತಪಟ್ಟ ಘಟನೆ ನಡೆದಿದೆ.
ಇದನ್ನೂ ಓದಿ: Datta Peetha: ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಮೋದ್ ಮುತಾಲಿಕ್
ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಗ್ರಾಮದ ಬಳಿ ಮೇಕೆ ಮೇಯಿಸಲು ಹೋಗಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವೆಂಕಟಲಕ್ಷ್ಮಮ್ಮ(55) ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕನಕಪುರದ ಪ್ರೈಡ್ ಹೋಟೆಲ್‌ನಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಮೈಸೂರು ಮೂಲದ ಯುವಕ ಮೃತಪಟ್ಟಿದ್ದಾನೆ. ಮೈಸೂರಿನ ಸಿದ್ದಾರ್ಥ ನಗರದ ನಿವಾಸಿ ಪ್ರೀತಂ(35) ಮೃತ ದುರ್ದೈವಿ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಕನಕಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೀತಂ ಮೃತಪಟ್ಟಿದ್ದಾನೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಿಮ್ ತರಲು ಹೋದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿ ಪ್ರಿಯಾ(37) ಡಿ.22 ರಂದು ನಾಪತ್ತೆಯಾಗಿದ್ದಾರೆ. ಪ್ರಿಯಾ ಕಂಡು ಬಂದರೆ ಠಾಣೆಗೆ, 9480805370 ಗೆ ಮಾಹಿತಿ ನೀಡುವಂತೆ ಬೆಳ್ತಂಗಡಿ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:42 pm, Tue, 27 December 22