ಈಡಿಗ-ಬಿಲ್ಲವ ಮೀಸಲಾತಿ ಹಕ್ಕೊತ್ತಾಯ: ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಸ್ಫೋಟ

Narayana Guru: ನಾರಾಯಣ ಗುರು ಟ್ಯಾಬ್ಲೋ, ಪಠ್ಯ ಪುಸ್ತಕ ವಿವಾದದ ಬಳಿಕ ಕರಾವಳಿಯ ಪ್ರಬಲ ಬಿಲ್ಲವ ಸಮುದಾಯದ ಆಕ್ರೋಶಕ್ಕೆ ಬಿಜೆಪಿ ತುತ್ತಾಗಿತ್ತು. ಇದೀಗ ಕಳೆದ ಆರು ವರ್ಷಗಳ ಮಹಾ ಬೇಡಿಕೆಗೆ ಚುನಾವಣೆ ‌ಹೊತ್ತಲ್ಲೇ ಮರುಜೀವ ಬಂದಿದ್ದು ಬಿಜೆಪಿ ಇದನ್ನು ಹೇಗೆ ನಿಭಾಯಿಸುತ್ತೆ ಎಂದು ಕಾದುನೋಡಬೇಕಿದೆ.

ಈಡಿಗ-ಬಿಲ್ಲವ ಮೀಸಲಾತಿ ಹಕ್ಕೊತ್ತಾಯ: ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಸ್ಫೋಟ
ಈಡಿಗ-ಬಿಲ್ಲವ ಮೀಸಲಾತಿ ಹಕ್ಕೊತ್ತಾಯ: ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಸ್ಫೋಟ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 31, 2022 | 4:24 PM

ರಾಜ್ಯದಲ್ಲಿ ಈಗ ಮೀಸಲಾತಿ (Reservation) ವಿಚಾರವೇ ಹೆಚ್ಚು ಚರ್ಚೆಯಲ್ಲಿದೆ. ಲೇಟೆಸ್ಟ್​ ಆಗಿ ಈಡಿಗ ಬಿಲ್ಲವ ಸಮುದಾಯವನ್ನು ಪ್ರವರ್ಗ 1ರಡಿ ಸೇರ್ಪಡೆಗೆ ಹಕ್ಕೊತ್ತಾಯ ಕೇಳಿ ಬಂದಿದೆ. ಕರಾವಳಿಯಲ್ಲಿ ನಿರ್ಣಾಯಕ ಮತದಾರರಾಗಿರುವ ಬಿಲ್ಲವ ಸಮುದಾಯ (Billava community) ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ನಡುವೆ ಸಮುದಾಯದ ಸ್ವಾಮೀಜಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಪಾದಯಾತ್ರೆಗೂ ತಯಾರಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಬಿಲ್ಲವ ಸಮಾಜದ ಆಕ್ರೋಶ ಸ್ಫೋಟ:

ಹೌದು.. ಕರಾವಳಿಯಲ್ಲಿ ಮೀಸಲಾತಿ ಹೆಸರಲ್ಲಿ ಬಿಲ್ಲವರು ಶಕ್ತಿ ‌ಪ್ರದರ್ಶನಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ. ಚುನಾವಣೆ ಹೊತ್ತಲ್ಲೇ ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಲು ಈಡಿಗ-ಬಿಲ್ಲವ ಸಮುದಾಯ ಸಜ್ಜಾಗಿದ್ದು ಜನವರಿ ಅಂತ್ಯದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ನಿರ್ಧರಿಸಿದೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಸಭೆ ಸೇರಿ ಬಿಲ್ಲವ ಮುಖಂಡರು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿರ್ಣಾಯಕವಾಗಿರೋ ಬಿಲ್ಲವ ವೋಟ್ ಬ್ಯಾಂಕ್ ಹಲವು ಬೇಡಿಕೆಗಳನ್ನು ಮುಂದಿಟ್ಟು ಈ ಸಮಾವೇಶ ನಡೆಸುತ್ತಿದೆ. ರಾಜ್ಯದಲ್ಲಿ ಸುಮಾರು 75 ಲಕ್ಷದಷ್ಟಿರೋ ಈಡಿಗ-ಬಿಲ್ಲವ ಸಮುದಾಯ ಸುಮಾರು 26 ಪಂಗಡಗಳನ್ನು ಹೊಂದಿದೆ. ಸದ್ಯ ಪ್ರವರ್ಗ 2ಎ ಅಡಿ ಸೇರಿರೋ ಬಿಲ್ಲವ-ಈಡಿಗ ಸಮುದಾಯ ಪ್ರವರ್ಗ 1 ರಡಿ ಸೇರ್ಪಡೆಗೆ ಹಕ್ಕೊತ್ತಾಯ ಮಾಡಿದೆ. ಇದರ ಜೊತೆ ನಾರಾಯಣ ಗುರು (Narayana Guru) ಅಭಿವೃದ್ದಿ ನಿಗಮ ಸ್ಥಾಪಿಸಬೇಕು, ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಒತ್ತಾಯವು ಇದೆ. (ವರದಿ: ಅಶೋಕ್, ಟಿವಿ 9, ಮಂಗಳೂರು)

ಈ ನಡುವೆ ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ -ಕಲಬುರಗಿಯ ಡಾ ಪ್ರಣಾವನಂದ ಸ್ವಾಮೀಜಿ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸುಮಾರು 658 ಕಿ.ಮೀ ದೂರದ ಪಾದಯಾತ್ರೆಯನ್ನು ನಡೆಸಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಜನವರಿ 6ರಂದು ಈ ಪಾದಯಾತ್ರೆ ಆರಂಭವಾಗಲಿದ್ದು ಒಟ್ಟು 35 ದಿನಗಳ ಕಾಲ ಈ ಪಾದಯಾತ್ರೆ ಸಾಗಲಿದೆ. ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

500 ಕೋಟಿ ಅನುದಾನ ಮೀಸಲಿರಿಸಿ ನಾರಾಯಣ ಗುರು ಅಭಿವೃದ್ದಿ ನಿಗಮ ಸ್ಥಾಪಿಸಬೇಕು, ಈಡಿಗ-ಬಿಲ್ಲವ ಸಮುದಾಯವನ್ನು ಪ್ರವರ್ಗ 1 ರಡಿ ಸೇರ್ಪಡೆಗೊಳಿಸಬೇಕು, ಚುನಾವಣೆ ಹೊತ್ತಲ್ಲಿ ಟಿಕೆಟ್ ನೀಡುವಲ್ಲಿ ಬಿಲ್ಲವರ ಕಡೆಗಣನೆ ಮಾಡುತಿದ್ದು ಹೀಗಾಗಿ ರಾಜಕೀಯ ಪಾತ್ರಿನಿಧ್ಯ ನೀಡಬೇಕು ಎಂಬುದು ಈ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಬಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ-ಕಲಬುರಗಿ ಸ್ವಾಮೀಜಿ ಡಾ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ನಾರಾಯಣ ಗುರು ಟ್ಯಾಬ್ಲೋ, ಪಠ್ಯ ಪುಸ್ತಕ ವಿವಾದದ ಬಳಿಕ ಕರಾವಳಿಯ ಪ್ರಬಲ ಬಿಲ್ಲವ ಸಮುದಾಯದ ಆಕ್ರೋಶಕ್ಕೆ ಬಿಜೆಪಿ ತುತ್ತಾಗಿತ್ತು. ಇದೀಗ ಕಳೆದ ಆರು ವರ್ಷಗಳ ಮಹಾ ಬೇಡಿಕೆಗೆ ಚುನಾವಣೆ ‌ಹೊತ್ತಲ್ಲೇ ಮರುಜೀವ ಬಂದಿದ್ದು ಬಿಜೆಪಿ ಇದನ್ನು ಹೇಗೆ ನಿಭಾಯಿಸುತ್ತೆ ಎಂದು ಕಾದುನೋಡಬೇಕಿದೆ.

Published On - 4:22 pm, Mon, 31 October 22

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ