ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು ಬಳಿಯ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್​ಡಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ಪುತ್ತೂರು ಮೂಲದವಳಾಗಿದ್ದು, ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿಯ ದೊಡ್ಡಪ್ಪ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ
ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ (ಸಾಂದರ್ಭಿಕ ಚಿತ್ರ)
Edited By:

Updated on: Feb 20, 2024 | 11:15 PM

ಮಂಗಳೂರು, ಫೆ.20: ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ (27) ನಾಪತ್ತೆಯಾದವಳು.

ಚೈತ್ರಾಳ ತಂದೆ ನಿಧನರಾಗಿದ್ದು, ದೊಡ್ಡಪ್ಪನ ಆಶ್ರಯದಲ್ಲಿದ್ದಳು. ಅಲ್ಲದೆ, ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್​ಸಿ ಮುಗಿಸಿದ ನಂತರ ಚೈತ್ರಾ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದಳು.

ಇದನ್ನೂ ಓದಿ: Video: ಪೋಸ್ಟ್ ಮಾಸ್ಟರ್ ನಾಪತ್ತೆ; ಆತಂಕದಲ್ಲಿ ಠೇವಣಿದಾರರು 

ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಾಳೆ ಎಂದು ಚೈತ್ರಾಳ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ಅದೇ ದಿನ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾಗಿ ಮೂರು ದಿನಗಳ ಕಳೆದರೂ ಚೈತ್ರಾ ಪತ್ತೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ