ಮಂಗಳೂರು ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ! ಆಂಧ್ರಪ್ರದೇಶದಲ್ಲಿ ಪ್ರಾಧ್ಯಾಪಕ ಅರೆಸ್ಟ್
ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಹೆಚ್ಡಿ ಮಾಡುತ್ತಿದ್ದರು. ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದರು.
ಮಂಗಳೂರು: ಪಿಹೆಚ್ಡಿ (PHD) ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಎಂಬುವವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಹೆಚ್ಡಿ ಮಾಡುತ್ತಿದ್ದರು. ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದರು. ಆದರೆ ವಿವಿಯ ಅನುಮತಿ ಕೇಳಿದಾಗ ಅವರಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಆದರೆ ಆ ಬಳಿಕವೂ ಸುಧೀರ್ನಿಂದ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಮನೆಯವರ ದೂರಿನ ಹಿನ್ನೆಲೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಸುಧೀರ್ ಕುಮಾರ್ ಹರಿಬಿಟ್ಟಿದ್ದಾನೆ ಎಂದು ಮನೆಯವರು ಆರೋಪಿಸಿದ್ದಾರೆ. ಮಾರ್ಚ್ 10ರಂದು ಮಂಗಳೂರಿನ ಸೈಬರ್ ಕ್ರೈಂಗೆ ದೂರು ನೀಡಿದ್ದರು. ಸದ್ಯ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 3,000 ಕೋಟಿ ಅನುದಾನ ನೀಡಲು ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಶಾಂತಿಯಿಂದಿದ್ದ ಗ್ರಾಮದಲ್ಲಿ ಮಾಟ-ಮಂತ್ರದ ಛಾಯೆ, ದಿನೇ ದಿನೇ ಹೆಚ್ಚಾಗುತ್ತಿದೆ ಗ್ರಾಮಸ್ಥರಲ್ಲಿ ಆತಂಕ