ಡ್ರಗ್ಸ್ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸ್ ಕಾರ್ಯಾಚರಣೆ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ

ಕಾರ್ಯಾಚರಣೆಯಲ್ಲಿ 5,00,000 ರೂಪಾಯಿ ಮೌಲ್ಯದ 100 ಗ್ರಾಂ ಎಂಡಿಎಂಎ, 4000 ರೂಪಾಯಿ ನಗದು, ಒಂದು ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 10,94,500 ರೂಪಾಯಿ ಎಂದು ಅಂದಾಜಿಸಲಾಗಿದೆ.

ಡ್ರಗ್ಸ್ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸ್ ಕಾರ್ಯಾಚರಣೆ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
ಬಂಧಿತರಿಂದ ವಶಪಡಿಸಿಕೊಳ್ಳಲಾದ ಕಾರು ಮತ್ತು ಡ್ರಗ್ಸ್
Follow us
| Updated By: ಗಣಪತಿ ಶರ್ಮ

Updated on:Aug 15, 2023 | 10:33 PM

ಮಂಗಳೂರು, ಆಗಸ್ಟ್ 15: ಡ್ರಗ್ಸ್ ಮಾಫಿಯಾ (Drugs Mafia) ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ಮಂಗಳವಾರ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 10 ಲಕ್ಷ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ ಎಂಡಿಎಂಎ (Methylene Dioxy Methamphetamine) ಡ್ರಗ್ಸ್ ಜಪ್ತಿ ಮಾಡಲಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆ ಮತ್ತು ಕಮಿಷನರೇಟ್ ವ್ಯಾಪ್ತಿಯ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗ್ಡೆ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಫಳ್ನೀರ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಗಳೂರಿನಿಂದ ತಂದಿದ್ದು ಎನ್ನಲಾದ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಹನೀಫ್, ಸೈಯದ್ ಫೌಜಾನ್​, ಸಿರಾಜುದ್ದೀನ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆಯಲ್ಲಿ 5,00,000 ರೂಪಾಯಿ ಮೌಲ್ಯದ 100 ಗ್ರಾಂ ಎಂಡಿಎಂಎ, 4000 ರೂಪಾಯಿ ನಗದು, ಒಂದು ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 10,94,500 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಕಾರ್ಯಾಚರಣೆಯಲ್ಲಿ ಅಳಪೆ ಗ್ರಾಮದ ಕಂಕನಾಡಿ ರೈಲು ನಿಲ್ದಾಣದ ರಸ್ತೆಯ ಬಳಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಅರ್ಷದ್ ವಿಕೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಿಯಪದವು ನಿವಾಸಿಯಾಗಿದ್ದಾನೆ. ಈತನ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

ಈ ಮಾದಕ ದ್ರವ್ಯ ಜಾಲದ ಮತ್ತಷ್ಟು ಸಂಪರ್ಕಗಳನ್ನು ಬಯಲಿಗೆಳೆಯಲು ಮಂಗಳೂರು ಸಿಸಿಬಿ ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ. ಆರೋಪಿ ಇಬ್ರಾಹಿಂ ಹರ್ಷದ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪ್ರಕರಣಗಳು ದಾಖಲಾಗಿವೆ. ಹೆಚ್ಚುವರಿಯಾಗಿ, ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು, ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:33 pm, Tue, 15 August 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ