ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು; ಆರೋಪಿಗಳಿಂದ ಜಾಮೀನು ಮುಚ್ಚಳಿಕೆ

ನೈತಿಕ ಪೊಲೀಸ್ ಗಿರಿ ಕೇಸ್​​ ಆರೋಪಿಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಅಪರಾಧ ಕೃತ್ಯ ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.

ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು; ಆರೋಪಿಗಳಿಂದ ಜಾಮೀನು ಮುಚ್ಚಳಿಕೆ
ನೈತಿಕ ಪೊಲೀಸ್ ಗಿರಿ ಕೇಸ್​​ ಮೇಲೆ ಮಂಗಳೂರು ಪೊಲೀಸರ ಕಣ್ಣು
Follow us
ಆಯೇಷಾ ಬಾನು
|

Updated on: Jun 06, 2023 | 10:30 AM

ಮಂಗಳೂರು: ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ ಗಿರಿ(Moral Policing) ಪುನರಾವರ್ತನೆ ಹಿನ್ನೆಲೆ ನೈತಿಕ ಪೊಲೀಸ್ ಗಿರಿ ಕೇಸ್​​ ಆರೋಪಿಗಳ ಮೇಲೆ ಪೊಲೀಸರು(Mangaluru Police) ಕಣ್ಣಿಟ್ಟಿದ್ದಾರೆ. ಅಪರಾಧ ಕೃತ್ಯ ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ. ಐದು ವರ್ಷಗಳಲ್ಲಿ ಈ ರೀತಿಯ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.

ಸೋಮೇಶ್ವರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ಹಿನ್ನೆಲೆಯಲ್ಲಿ ಶನಿವಾರ ಪತ್ರಕರ್ತರು ಆಯುಕ್ತರನ್ನು ಪ್ರಶ್ನಿಸಿದಾಗ, ಮುಂಜಾಗರೂಕತ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು. ಇದುವರೆಗೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿಯ 1.90 ಲ.ರೂ. ಬಾಂಡ್‌ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್(Dr G Parameshwar) ಅವರು ಇಂದಿನಿಂದ 2 ದಿನ ಮಂಗಳೂರು(Mangaluru), ಉಡುಪಿ(Udupi) ಪ್ರವಾಸ ಕೈಗೊಂಡಿದ್ದಾರೆ. ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಉಡುಪಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ