MCCTNS: ಅಪರಾಧ ತಡೆಗೆ ಎಂಸಿಸಿಟಿಎನ್​ಎಸ್ ಮೊರೆ ಹೋದ ಮಂಗಳೂರು ಪೊಲೀಸರು; ಏನಿದು ತಂತ್ರಜ್ಞಾನ? ಇಲ್ಲಿದೆ ಮಾಹಿತಿ

ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ, ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರು ಕಂಡುಬಂದಲ್ಲಿ ಅವರ ತಪಾಸಣೆಗೆ ಎಂಸಿಸಿಟಿಎನ್​ಎಸ್ ಬಳಸಲಾಗುತ್ತದೆ. ಜತೆಗೆ ಅವರ ವಿವರ ಸಂಗ್ರಹಿಸಲಾಗುತ್ತದೆ. ಇದರಿಂದ ಅಪರಾಧ ಹಿನ್ನೆಲೆಯುಳ್ಳವರಾದರೆ ಕ್ರಮ ಕೈಗೊಳ್ಳಲು ಮತ್ತು ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

MCCTNS: ಅಪರಾಧ ತಡೆಗೆ ಎಂಸಿಸಿಟಿಎನ್​ಎಸ್ ಮೊರೆ ಹೋದ ಮಂಗಳೂರು ಪೊಲೀಸರು; ಏನಿದು ತಂತ್ರಜ್ಞಾನ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 21, 2023 | 3:01 PM

ಮಂಗಳೂರು: ರಾತ್ರಿ ವೇಳೆ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪೊಲೀಸರು (Mangalore Police) ‘ಮೊಬೈಲ್ ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಂ (MCCTNS) ಪೋರ್ಟಬಲ್ ಸ್ಕ್ಯಾನರ್’ ಮೊರೆ ಹೋಗಿದ್ದಾರೆ. ಈ ತಂತ್ರಜ್ಞಾನದ ಬಳಕೆಯಿಂದ ರಾತ್ರಿ ವೇಳೆಯಲ್ಲಿ ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದು ಸಾಧ್ಯವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ, ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರು ಕಂಡುಬಂದಲ್ಲಿ ಅವರ ತಪಾಸಣೆಗೆ ಎಂಸಿಸಿಟಿಎನ್​ಎಸ್ ಬಳಸಲಾಗುತ್ತದೆ. ಜತೆಗೆ ಅವರ ವಿವರ ಸಂಗ್ರಹಿಸಲಾಗುತ್ತದೆ. ಇದರಿಂದ ಅಪರಾಧ ಹಿನ್ನೆಲೆಯುಳ್ಳವರಾದರೆ ಕ್ರಮ ಕೈಗೊಳ್ಳಲು ಮತ್ತು ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಂಸಿಸಿಟಿಎನ್​ಎಸ್ ಎಂದರೇನು?

ಎಂಸಿಸಿಟಿಎನ್​ಎಸ್ ಅಥವಾ ಮೊಬೈಲ್ ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಂ ಎಂಬುದು ಒಂದು ಪೋರ್ಟಬಲ್ ಸ್ಕ್ಯಾನರ್ ಆಗಿದೆ. ಇದರ ಮೂಲಕ ಪೊಲೀಸರು ಶಂಕಿತರ ಅಪರಾಧ ಹಿನ್ನೆಲೆಗೆ ಸಂಬಂಧಿಸಿದ ದತ್ತಾಂಶಗಳು, ವಿವರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ ಇದನ್ನು ಕೊಂಡೊಯ್ಯುವುದೂ ಪೊಲೀಸರಿಗೆ ಸುಲಭವಾಗಿದೆ.

ಹೇಗೆ ಕೆಲಸ ಮಾಡುತ್ತದೆ ಎಂಸಿಸಿಟಿಎನ್​ಎಸ್?

ಗಸ್ತು ಕಾರ್ಯಾಚರಣೆಗೆ ತೆರಳುವ ಪೊಲೀಸರು ಎಂಸಿಸಿಟಿಎನ್​ಎಸ್ ಪೋರ್ಟಬಲ್ ಸ್ಕ್ಯಾನರ್ ಅನ್ನು ಜತೆಗೆ ಕೊಂಡೊಯ್ಯುತ್ತಾರೆ. ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಅವರ ಬೆರಳಚ್ಚನ್ನು ಪರಿಶೀಲಿಸುತ್ತಾರೆ. ಬೆರಳಚ್ಚು ಸ್ಕ್ಯಾನ್ ಮಾಡಿದ ಕೂಡಲೇ ಅವರ ಅಪರಾಧ ಹಿನ್ನೆಲೆಗೆ (ಅಪರಾಧ ಹಿನ್ನೆಲೆ ಹೊಂದಿದ್ದರೆ) ಸಂಬಂಧಿಸಿದ ದತ್ತಾಂಶಗಳು ಪೊಲೀಸರಿಗೆ ದೊರೆಯುತ್ತವೆ. ಎಫ್​ಐಆರ್ ಮಾಹಿತಿ, ಬಾಕಿ ಇರುವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಮಾಹಿತಿ ದೊರೆಯುತ್ತದೆ.

ಈ ವ್ಯವಸ್ಥೆಯಿಂದ ಪೊಲೀಸ್ ಆಡಳಿತದಲ್ಲಿ ಹೆಚ್ಚು ದಕ್ಷತೆ ಸಾಧಿಸಲು ಮತ್ತು ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಹೆಚ್ಚಿನ ನೆರವು ದೊರೆಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ
ಅಪಘಾತದ ಸ್ವರೂಪ ನೋಡಿದರೆ ಕಾರು ಚಾಲಕ ಬದುಕುಳಿದಿದ್ದೇ ಪವಾಡ