ಮಂಗಳೂರು ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ವೇಳಾಪಟ್ಟಿ ಇಲ್ಲಿದೆ

ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಕಬಕ ಪುತ್ತೂರಿನ ವರೆಗೆ ಸಂಚರಿಸುತ್ತಿದ್ದ ರೈಲನ್ನು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಲಾಗಿದೆ. ರೈಲಿಗೆ ಚಾಲನೆ ನೀಡಲಾಗಿದ್ದು, ವೇಳಾಪಟ್ಟಿ ಹಾಗೂ ಇತರ ವಿವರಗಳು ಇಲ್ಲಿವೆ.

ಮಂಗಳೂರು ಪುತ್ತೂರು ಪ್ಯಾಸೆಂಜರ್  ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ವೇಳಾಪಟ್ಟಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: Apr 12, 2025 | 6:39 PM

ಮಂಗಳೂರು, ಏಪ್ರಿಲ್ 12: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ (Puttur) ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್​ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ  (Indian Railways) ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲ್ವೆ‌ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಿದರು.

ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು ವೇಳಾಪಟ್ಟಿ

ಮಂಗಳೂರು ಸೆಂಟ್ರಲ್ -ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜ‌ರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜ‌ರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ ಹೊರಟು 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ಹೊರಟು ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ. ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ
ಬೆಂಗಳೂರು - ಕಣ್ಣೂರು ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು, ಇಲ್ಲಿದೆ ವಿವರ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ
18,658 ಕೋಟಿ ರೂ ಹೂಡಿಕೆಯಲ್ಲಿ 4 ರೈಲ್ವೆ ಯೋಜನೆಗಳು

ಕೆಲವು ದಿನಗಳ ಹಿಂದಷ್ಟೇ ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಸಂದರ್ಭದಲ್ಲಿ ಸಚಿವ ಸೋಮಣ್ಣ ಈ ಘೋಷಣೆ ಮಾಡಿದ್ದರು. ಇದೀಗ ಅದರಂತೆ ರೈಲಿಗೆ ಚಾಲನೆ ನೀಡಿದ್ದಾರೆ.

ಧಾರವಾಡ – ಬೆಂಗಳೂರು ವಂದೇ ಭಾರತ್‌ ರೈಲಿಗೆ ಹಾವೇರಿಯಲ್ಲಿ ನಿಲುಗಡೆ

ಧಾರವಾಡ – ಬೆಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಹಾವೇರಿಯಲ್ಲಿ ನಿಲುಗಡೆ ಶುಕ್ರವಾರದಿಂದ ಆರಂಭವಾಗಿದೆ. ಹೆಚ್ಚುವರಿ ನಿಲುಗಡೆಗೆ ಹಸಿರು ನಿಶಾನೆ ತೋರುವ ಮೂಲಕ ಸಚಿವ ಸೋಮಣ್ಣ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ