Dakshina Kannada Rain: ಕರಾವಳಿಯಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ

Karnataka Rain: ಭಾರೀ ಮಳೆಯಿಂದ ದಕ್ಷಿಣ ಕನ್ನಡದಲ್ಲಿ ಅಂಗನವಾಡಿಯಿಂದ ಡಿಗ್ರಿಯವರೆಗೆ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜುಗಳಿಗೆ ಇಂದು ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ನೀಡಿದ್ದಾರೆ.

Dakshina Kannada Rain: ಕರಾವಳಿಯಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ
ಮಂಗಳೂರಿನಲ್ಲಿ ಭಾರೀ ಮಳೆImage Credit source: Twitter
Follow us
TV9 Web
| Updated By: Digi Tech Desk

Updated on:Jul 05, 2022 | 8:53 AM

ಮಂಗಳೂರು: ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆ (Heavy Rainfall) ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada Rains) ಎಲ್ಲಾ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಸರ್ಕಾರಿ ಮತ್ತು ಖಾಸಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ನೀಡಿದ್ದಾರೆ. ಅಂಗನವಾಡಿಯಿಂದ ಡಿಗ್ರಿ ಕಾಲೇಜ್​ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ಭಾರೀ ಮಳೆಯಿಂದಾಗಿ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಬೃಹತ್ ಮರ ರಸ್ತೆಗುರುಳಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಂಗಳೂರು ಹೊರವಲಯದ ಮಾಡೂರು ಬಳಿ ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ವಿದ್ಯುತ್ ಕೇಬಲ್ ಲೈನ್ ‌ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಮರ ಉರುಳಿ ಬಿದ್ದು ಬೆಳಿಗ್ಗಿನಿಂದ ವಿದ್ಯುತ್ ಸಂಚಾರ ವ್ಯತ್ಯಯವಾಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತವಾಗಿದೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

ಇದನ್ನೂ ಓದಿ: Karnataka Rain: ಭಾರೀ ಮಳೆಗೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ತತ್ತರ; ಕರಾವಳಿಗೆ ಆರೆಂಜ್ ಅಲರ್ಟ್​

ಕಳೆದೊಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದು ಕೂಡ ಮುಂದುವರಿದ್ದು, ಸುಬ್ರಹ್ಮಣ್ಯ, ಬೆಳ್ತಂಗಡಿ, ಬಂಟ್ವಾಳ ಮುಂತಾದೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳ್ತಂಗಡಿಯಲ್ಲಿ ಈ ವರ್ಷವೂ ಪ್ರವಾಹದ ಆತಂಕ ಎದುರಾಗಿದೆ. ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ತಾಲ್ಲೂಕಿನ ಕಡಬ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ ಮುಂದುವರಿದೆ. ಹಲವೆಡೆ ಮಣ್ಣು ಕುಸಿತ ಮುಂದುವರಿದಿದೆ. ಹಲವು ಕಡೆ ಮರಗಳು ಧರೆಗುರುಳಿವೆ.

ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿಯೂ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.

Published On - 8:08 am, Tue, 5 July 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ