ಮಂಗಳೂರು MRPLನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರ ಸಾವು

ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿರುವ MRPL ಘಟಕದಲ್ಲಿ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಒಎಂಎಸ್ ವಿಭಾಗದಲ್ಲಿನ ದೋಷದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಕಾರ್ಮಿಕರನ್ನು ರಕ್ಷಿಸಲು ಯತ್ನಿಸಿದ ಇನ್ನೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ. ಎಂಆರ್‌ಪಿಎಲ್ ಈ ಘಟನೆಗೆ ಸಂಬಂಧಿಸಿದಂತೆ ತನಿಖಾ ಸಮಿತಿ ರಚಿಸಿದೆ.

ಮಂಗಳೂರು MRPLನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರ ಸಾವು
ಮೃತ ಬಿಜಿಲ್​ ಪ್ರಸಾದ್​, ದೀಪಕ್​ ಚಂದ್ರ
Edited By: ವಿವೇಕ ಬಿರಾದಾರ

Updated on: Jul 12, 2025 | 3:14 PM

ಮಂಗಳೂರು, ಜುಲೈ 12: ಮಂಗಳೂರು (Mangaluru) ಹೊರವಲಯದ ಸುರತ್ಕಲ್​ನಲ್ಲಿರುವ ರಿಫೈನರಿ ಆ್ಯಂಡ್​ ಪೆಟ್ರೋ ಕೆಮಿಕಲ್​ (MRPL) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪ್ರಯಾಗ್​ರಾಜ್ ಮೂಲದ ದೀಪ ಚಂದ್ರ ಭಾರ್ತಿಯಾ (33), ಕೇರಳದ ಬಿಜಿಲ್ ಪ್ರಸಾದ್ (33) ಮೃತಪಟ್ಟ ಕಾರ್ಮಿಕರು. ಇವರನ್ನು ರಕ್ಷಿಸಲು ಯತ್ನಿಸಿದ ಗದಗ ಮೂಲದ ವಿನಾಯಕ ಅಸ್ವಸ್ಥಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. MRPLನ ಒಎಂಎಸ್(ಆಯಿಲ್ ಮೂವ್​ಮೆಂಟ್ ಸರ್ವಿಸ್)ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಮಿಕರು ಪರಿಶೀಲನೆಗೆ ತೆರಳಿದ್ದರು. ಎಂಎಂಎಸ್ ವಿಭಾಗದ ಟ್ಯಾಂಕ್ ಮೇಲ್ಚಾವಣಿಗೆ ತೆರಳಿದಾಗ ವಿಷಾನಿಲ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡ ದೀಪಚಂದ್ರ ಮತ್ತು ಬಿಜಿಲ್ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಗದಗ ಮೂಲದ ವಿನಾಯಕ ಮಯಗೇರಿಗೆ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಎಂಆರ್​ಪಿಎಲ್ ಆಡಳಿತ ಮಂಡಳಿ ಗ್ರೂಪ್ ಜನರಲ್ ಮ್ಯಾನೇಜರ್ ಒಳಗೊಂಡ ಉನ್ನತಮಟ್ಟದ ತನಿಖೆಗೆ ಸಮಿತಿ ರಚಿಸಿದೆ.

ಇದನ್ನೂ ಓದಿ: ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಭೂಗತ ಪಾತಕಿ ಎಂಟ್ರಿ!

ಇದನ್ನೂ ಓದಿ
ಯುವತಿಯ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಬಂಧನ
ಬಿಜೆಪಿ ಮುಖಂಡನ ಮಗನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಯುವತಿ
ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ!
ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

ವಿಷಾನಿಲ ಸೇವಿಸಿ ಒಟ್ಟು ಐವರು ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಇಬ್ಬರು ಮೃತಪಟ್ಟರು. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ.

ಹೃದಯಾಘಾತದಿಂದ ವೈದ್ಯ ಸಾವು

ಬೆಂಗಳೂರು ದಕ್ಷಿಣ: ಕನಕಪುರ‌ ನಗರದಲ್ಲಿ ಹೃದಯಾಘಾತದಿಂದ ವೈದ್ಯ ಮಂಜುನಾಥ್ (64) ಮೃತಪಟ್ಟಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಮಂಜುನಾಥ್​ಗೆ ಎದೆನೋವು‌ ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಡಾ.ಮಂಜುನಾಥ್ ಮೃತಪಟ್ಟಿದ್ದಾರೆ. ಮೃತ ಮಂಜುನಾಥ್ ಕನಕಪುರದಲ್ಲಿ ಖಾಸಗಿ ನರ್ಸಿಂಗ್ ಹೋಮ್ ನಡೆಸುತ್ತಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Sat, 12 July 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us