AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರೀ ಮಳೆ, ಗಾಳಿಯಿಂದ ಮೆಸ್ಕಾಂಗೆ 33.4 ಕೋಟಿ ರೂ. ನಷ್ಟ

ಮೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ, ಮಳೆಯಿಂದಾಗಿ ಮೆಸ್ಕಾಂಗೆ ಅಪಾರ ನಷ್ಟ ಉಂಟಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಷ್ಟು ನಷ್ಟವಾಗಿದೆ? ಏನೇನು ಹಾನಿಯಾಗಿದೆ ಎಂಬ ಮಾಹಿತಿಯನ್ನು ಮೆಸ್ಕಾಂ ಬಹಿರಂಗಪಡಿಸಿದೆ. ಜತೆಗೆ, ದುರಸ್ತಿ ಹಾಗೂ ಪುನಃಸ್ಥಾಪನೆ ಕಾರ್ಯ ಪ್ರಗತಿಯಲ್ಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದೆ.

ಮಂಗಳೂರು: ಭಾರೀ ಮಳೆ, ಗಾಳಿಯಿಂದ ಮೆಸ್ಕಾಂಗೆ 33.4 ಕೋಟಿ ರೂ. ನಷ್ಟ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 07, 2024 | 3:01 PM

Share

ಮಂಗಳೂರು, ಆಗಸ್ಟ್ 7: ಕಳೆದ ಒಂದು ತಿಂಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಬೀಸುತ್ತಿರುವ ಭಾರಿ ಗಾಳಿಯ ಪರಿಣಾಮ ಮೆಸ್ಕಾಂ ವ್ಯಾಪ್ತಿಯಲ್ಲಿ 21702 ವಿದ್ಯುತ್ ಕಂಬಗಳು ಧರೆಗುರುಳಿವೆ. ಹೆಚ್ಚುವರಿಯಾಗಿ, ವಿದ್ಯುತ್ ಟ್ರಾನ್ಸ್​​ಫಾರ್ಮರ್​​ಗಳು ಮತ್ತು ಕೇಬಲ್​ಗಳಿಗೆ ಹಾನಿಯಾಗಿದೆ. ಒಟ್ಟಾರೆ ಅಂದಾಜು 33.40 ಕೋಟಿ ರೂ. ನಷ್ಟವಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ದಕ್ಷಿಣ ಕನ್ನಡದಲ್ಲಿ 10.14 ಕೋಟಿ ರೂಪಾಯಿ ಹಾನಿಯ ಅಂದಾಜಿಸಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ 9.67 ಕೋಟಿ ರೂಪಾಯಿ ಮೌಲ್ಯದ ಉಪಕರಣಗಳು ನಾಶವಾಗಿವೆ. ಉಡುಪಿ ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 8.48 ಕೋಟಿ ರೂ. ಹಾಗೂ 5.09 ಕೋಟಿ ರೂ. ನಷ್ಟವಾಗಿದೆ. ಹಾನಿಗೊಳಗಾಗಿರುವ ಬಹುತೇಕ ಉಪಕರಣಗಳನ್ನು ದುರಸ್ತಿ ಮಾಡಲಾಗಿದೆ. ಉಳಿದವುಗಳ ದುರಸ್ತಿ ಮತ್ತು ಬದಲಾವಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡದಲ್ಲಿ 6,369 ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಚಿಕ್ಕಮಗಳೂರಿನಲ್ಲಿ 5,697, ಶಿವಮೊಗ್ಗದಲ್ಲಿ 4,960 ಮತ್ತು ಉಡುಪಿಯಲ್ಲಿ 4776 ವಿದ್ಯುತ್ ಕಂಬಗಳು ಧರೆಗುರುಳಿವೆ.

ನೆಲಕ್ಕುರುಳಿರುವ 21702 ವಿದ್ಯುತ್ ಕಂಬಗಳ ಪೈಕಿ 21245 ಹೊಸ ಕಂಬಗಳನ್ನು ಈಗಾಗಲೇ ಅಳವಡಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ 316 ವಿದ್ಯುತ್ ಟ್ರಾನ್ಸ್​​ಫಾರ್ಮರ್​​ಗಳು ಹಾಳಾಗಿವೆ. ಎಲ್ಲವನ್ನೂ ಸರಿಪಡಿಸಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ದಕ್ಷಿಣ ಕನ್ನಡದಲ್ಲಿ 318.15 ಕಿಮೀ ಉದ್ದದ ವಿದ್ಯುತ್ ತಂತಿಗಳು ಹಾಳಾಗಿವೆ. ಉಡುಪಿಯಯಲ್ಲಿ 86.39 ಕಿಮೀ, ಚಿಕ್ಕಮಗಳೂರು 111.94 ಕಿಮೀ ಮತ್ತು ಶಿವಮೊಗ್ಗ 97.82 ಕಿಮೀ ಸೇರಿದಂತೆ ಒಟ್ಟು 614.30 ಕಿಮೀ ಉದ್ದದ ವಿದ್ಯುತ್ ತಂತಿ ಹಾನಿಗೊಂಡಿದೆ. ಇವುಗಳಲ್ಲಿ ಈಗಾಗಲೇ 604.43 ಕಿ.ಮೀ ತಂತಿಗಳನ್ನು ಬದಲಾಯಿಸಲಾಗಿದೆ.

ಇದನ್ನೂ ಓದಿ: ಮಂಗಳೂರು ಮಹಾನಗರ ಪಾಲಿಕೆಯಿಂದ ‘ಟೈಗರ್ ಆಪರೇಷನ್’! ಏನಿದು ಕಾರ್ಯಾಚರಣೆ?

ಮಳೆ, ಗಾಳಿಯ ನಡುವೆಯೂ ಮೆಸ್ಕಾಂ ಸಿಬ್ಬಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಹಕರು ಮೆಸ್ಕಾಂ ಸಿಬ್ಬಂದಿಗೆ ಸಹಕರಿಸಬೇಕಿದೆ ಎಂದು ಮೆಸ್ಕಾಂ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ