ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 04, 2024 | 6:53 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಫೆ.04) ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಬಸ್​ ಹರಿದು ಇಬ್ಬರು ಮೃತರಾದರೆ, ಇತ್ತ ತಾಲೂಕಿನ ಮಂಜೊಟ್ಟಿ ಬಳಿ ವೇಗವಾಗಿ ಬಂದ ಬಸ್​, ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು
ಪ್ರಾತಿನಿಧಿಕ ಚಿತ್ರ
Follow us on

ದಕ್ಷಿಣ ಕನ್ನಡ, ಫೆ.04: ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ. ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಪರಾರಿ ನಿವಾಸಿ ಧರಣೇಂದ್ರ (24) ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಬಸ್, ನಿಯಂತ್ರಣ ಕಳೆದುಕೊಂಡು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಧರಣೇಂದ್ರ ಎಂಬಾತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯಯೇ ಮೃತರಾಗಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ