ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ
ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದ ದಿನೇಶ್ ಗುಂಡೂರಾವ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Feb 17, 2024 | 2:05 PM

ಮಂಗಳೂರು, ಫೆ.17: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂತ ಜೆರೋಸಾ ಶಾಲೆಯ (St. Gerosa School) ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. IAS ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.

ಇದನ್ನೂ ಓದಿ: ಅಭಿವೃದ್ಧಿ ಬೇಕಾ? ಧರ್ಮ ಪ್ರಚೋದನಾಕಾರಿ ಮಾತುಗಳು ಬೇಕಾ; ಇದನ್ನು ಜನರ ಮುಂದಿಡುತ್ತೇವೆ: ದಿನೇಶ್ ಗುಂಡೂರಾವ್

ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದರು.

ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ

ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾವೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಧ್ಯೇಯ ವಾಕ್ಯ ಹೊಂದಿರುವ ಯೋಜನೆ ಇದಾಗಿದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದರು.

ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ. ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದೇವೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ