ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು
ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೊಸಾ ಶಾಲಾ ಶಿಕ್ಷಕಿ ಅಮಾನತು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Feb 12, 2024 | 6:41 PM

ಮಂಗಳೂರು, ಫೆ.12: ಶ್ರೀರಾಮನಿಗೆ (Sri Ram) ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ (St Gerosa School) ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.

ಇದನ್ನೂ ಓದಿ: ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರಿಗೆ ಅವಹೇಳನ; ಶಾಲೆಗೆ ಮುತ್ತಿಗೆ

ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.

ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಅಮಾನತು ಮಾಡಿದರೂ ತಪ್ಪು ಒಪ್ಪಿಕೊಳ್ಳದ ಶಾಲಾಡಳಿತ.

ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಸಂಬಂಧ ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಮುಖ್ಯ ಶಿಕ್ಷಕಿ ಅಮಾನತು ಆದೇಶ ಓದುವ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೋಷಕರು ಮತ್ತೆ ರೊಚ್ಚಿಗೆದಿದ್ದಾರೆ. ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ. ನಿಮ್ಮ ದಾರಿಗೆ ನಿಮಗೆ, ನಮ್ಮ ದಾರಿ ನಮಗೆ ಅಂತ ಕಾಮತ್ ಎಚ್ಚರಿಕೆ ನೀಡಿದರು.

ಏನಿದು ಪ್ರಕರಣ?

ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಲಾಗಿದ್ದಾರೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾಸಿದ ಆಡಿಯೋ ವೈರಲ್ ಆಗಿತ್ತು.

ಅದರಂತೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲಾ ಆವರಣದಲ್ಲಿ ಜಮಾಯಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಆಡಳಿತ ಮಂಡಳಿ ಜೊತೆ ಮಾತನಾಡಿ ತೆರಳುವ ವೇಳೆ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಐವನ್ ಡಿಸೋಜಾ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.

ವಿದ್ಯಾರ್ಥಿಗಳಿಗೆ ಹಿಂದೂ ದೇವರ ಮೇಲಿನ ನಂಬಿಕೆ ಹೋಗುವಂತೆ ಕ್ರೈಸ್ತ ಮತವನ್ನು ವೈಭವೀಕರಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ವಿದ್ಯಾರ್ಥಿ ಪೋಷಕರಾದ ಶರತ್ ಕುಮಾರ್ ಎಂಬವವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನಿನ್ನೆ ದೂರು‌ ನೀಡಿದ್ದರು.

ಸಿಸ್ಟರ್‌ ಪ್ರಭಾ ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹಿಂದೂ ಧರ್ಮದ ವಿರುದ್ಧ ಹಿಂದೂ ದೇವರುಗಳ ಬಗ್ಗೆ, ನಮ್ಮ ದೇಶದ ಪ್ರಧಾನಿಗಳ ಬಗ್ಗೆ ಹಾಗೂ ಹಿಂದೂ ಧರ್ಮದ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ, ಹಿಂದೂ ಧರ್ಮವನ್ನು ನಿಂದಿಸಿ, ಹೀಯಾಳಿಸಿ, ತುಚ್ಛವಾಗಿ ಕೆಟ್ಟ ಶಬ್ದಗಳನ್ನು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Mon, 12 February 24