AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತು

ಹಿಜಾಬ್ ಧರಿಸಿ ಬಂದಿದ್ದಕ್ಕಾಗಿ ಜೂನ್ 8ರವರೆಗೆ ಕಾಲೇಜಿನಿಂದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 04, 2022 | 1:02 PM

Share

ಮಂಗಳೂರು: ನಿಷೇಧದ ಬಳಿಕವೂ ಹಿಜಾಬ್ (Hijab) ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಅಮಾನತ್ತಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಹಿಜಾಬ್ ಧರಿಸಿ ಬಂದಿದ್ದಕ್ಕಾಗಿ ಜೂನ್ 8ರವರೆಗೆ ಕಾಲೇಜಿನಿಂದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಹೀಗೆ ಸತತ ಸೂಚನೆ ಬಳಿಕವೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯನ್ನ ಅಮಾನತು ಮಾಡಲಾಗಿದೆ. ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: IND vs PAK: ಈ ವರ್ಷ ಭಾರತ-ಪಾಕಿಸ್ತಾನ್ 5 ಬಾರಿ ಮುಖಾಮುಖಿಯಾಗುವ ಸಾಧ್ಯತೆ..!

ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು: ಇನ್ನು ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆ ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಆದರೆ ಹಿಜಾಬ್​ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ: ಘಟನೆ ವರದಿ ಮಾಡಲು ತೆರಳಿದ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ವಿಡಿಯೋವನ್ನು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ ಕಾಲೇಜಿನ ಘಟನೆಯನ್ನು ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ‌. ಈ ವೇಳೆ ಪೋಲೀಸರು ವಿದ್ಯಾರ್ಥಿಗಳನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.