AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ

ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧ, ಸೆಕ್ಷನ್ 144 ಜಾರಿ
Mangaluru Police Commissioner Shashi Kumar
TV9 Web
| Edited By: ಆಯೇಷಾ ಬಾನು|

Updated on:Dec 25, 2022 | 8:26 AM

Share

ಮಂಗಳೂರು: ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಫಾತಿಮಾ ಎಂಬ ಸ್ಟೋರ್ ಬಳಿ ಡಿ.24ರ ರಾತ್ರಿ 8:30ರ ಸುಮಾರಿಗೆ ಘನಘೋರ ದುರಂತ ನಡೆದಿದೆ. ಸ್ಟೋರ್​ ಮಾಲೀಕ ಅಬ್ದುಲ್ ಜಲೀಲ್​ ಅಂಗಡಿ ಬಾಗಿಲು ಮುಚ್ಚಿ​ ಮನೆಗೆ ಹೋಗಬೇಕಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಕ್ಷುಲ್ಲಕ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಿಡಿಗೇಡಿಗಳು ಏಕಾಏಕಿ ಚಾಕು ತೆಗೆದು ಜಲೀಲ್​ಗೆ ಇರಿದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್ 144 ಹಾಕಲಾಗಿದೆ.

ಮಂಗಳೂರಿನ ಸುರತ್ಕಲ್​​ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಿಗೆ, ಕ್ರಿಸ್​ಮಸ್​ ಹಬ್ಬ ಆಚರಣೆಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ

ಮದ್ಯ ಮಾರಾಟ ನಿಷೇಧ

ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಇಂಡಸ್ಟ್ರೀಸ್ ಹಾಗೂ ಸಂಕೀರ್ಣಗಳಿಗೆ ಪೊಲೀಸ್ ಅಡ್ವೈಸರಿ

ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ಗಂಟೆ ಒಳಗೆ ಶಿಫ್ಟ್ ಚೆಂಜ್ ಮಾಡಲು ಸೂಚಿಸಲಾಗಿದೆ. ಸಂಜೆ 6 ರಿಂದ ಬೆಳಗ್ಗೆ 6 ರವರೆಗೂ ಸಿಬ್ಬಂದಿಗಳು ರಸ್ತೆಯಲ್ಲಿ ಇರದಂತೆ ನೋಡಿಕೊಳ್ಳಲು ಆದೇಶಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:25 am, Sun, 25 December 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ