ಮಂಗಳೂರು: ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಫಾತಿಮಾ ಎಂಬ ಸ್ಟೋರ್ ಬಳಿ ಡಿ.24ರ ರಾತ್ರಿ 8:30ರ ಸುಮಾರಿಗೆ ಘನಘೋರ ದುರಂತ ನಡೆದಿದೆ. ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗಬೇಕಿತ್ತು. ಈ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕ್ಷುಲ್ಲಕ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಿಡಿಗೇಡಿಗಳು ಏಕಾಏಕಿ ಚಾಕು ತೆಗೆದು ಜಲೀಲ್ಗೆ ಇರಿದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್ 144 ಹಾಕಲಾಗಿದೆ.
ಮಂಗಳೂರಿನ ಸುರತ್ಕಲ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಿಗೆ, ಕ್ರಿಸ್ಮಸ್ ಹಬ್ಬ ಆಚರಣೆಗೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ
ಮದ್ಯ ಮಾರಾಟ ನಿಷೇಧ
ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಇಂಡಸ್ಟ್ರೀಸ್ ಹಾಗೂ ಸಂಕೀರ್ಣಗಳಿಗೆ ಪೊಲೀಸ್ ಅಡ್ವೈಸರಿ
ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಂಜೆ 6 ಗಂಟೆ ಒಳಗೆ ಶಿಫ್ಟ್ ಚೆಂಜ್ ಮಾಡಲು ಸೂಚಿಸಲಾಗಿದೆ. ಸಂಜೆ 6 ರಿಂದ ಬೆಳಗ್ಗೆ 6 ರವರೆಗೂ ಸಿಬ್ಬಂದಿಗಳು ರಸ್ತೆಯಲ್ಲಿ ಇರದಂತೆ ನೋಡಿಕೊಳ್ಳಲು ಆದೇಶಿಸಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:25 am, Sun, 25 December 22