ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಸಮುದ್ರತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ.

ಮಂಗಳೂರು: ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು
ಸಮುದ್ರಪಾಲಾದ ವಿದ್ಯಾರ್ಥಿಗಳು
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 09, 2023 | 5:34 PM

ದಕ್ಷಿಣ ಕನ್ನಡ, ಡಿ.09: ಸಮುದ್ರತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್​ ಹಾಗೂ ಯುವರಾಜ್ ಮೃತ ವಿದ್ಯಾರ್ಥಿಗಳು. ಇನ್ನು ಇವರ ಮೃತ ದೇಹಕ್ಕಾಗಿ ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ. ಇನ್ನು ಘಟನೆ ಹಿನ್ನಲೆ ಸೋಮೇಶ್ವರ ಸಮುದ್ರ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಜಲು ತೆರಳದಂತೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ಸೂಚಿಸಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.03 ರಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಐವರು ಸ್ನೇಹಿತರ ಪೈಕಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಕಲಬುರಗಿ ಮೂಲದ ಆಕಾಶ ಮತ್ತು ಅಭಿಷೇಕ್​ ಎಂಬುವವರು ಕೊನೆಯುಸಿರೆಳೆದಿದ್ದರು. ಬೀಚ್​ನಲ್ಲಿ ಯಾಂತ್ರಿಕ ಬೋಟ್ ಓಡಿಸುತ್ತಿರುವಾಗ ಅಲೆಗಳ ಜೋರಾದ ರಭಸಕ್ಕೆ ಸಿಲುಕಿ ಈ ದುರ್ಘಟನೆ ನಡೆದಿತ್ತು.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಈ ಘಟನೆ ಮರೆಮಾಚುವ ಮುನ್ನವೇ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೊನೆಯುಸಿರೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Sat, 9 December 23

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us