ಉಜಿರೆ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ, ನಾಲ್ವರ ವಿರುದ್ಧ ದೂರು ದಾಖಲು
ಮೊಹಮ್ಮದ್ ಜಹೀರ್ ಎಂಬ ಯುವಕ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ತನಗೆ ಪರಿಚಯವಿದ್ದ ಯುವತಿ ಕಂಡು ಮಾತನಾಡಿಸಿದ್ದ. ಇದನ್ನು ತಿಳಿದ ಗುಂಪೊಂದು ಹಲ್ಲೆ ನಡೆಸಿದೆ.
ಮಂಗಳೂರು: ಯುವತಿಯೊಂದಿಗೆ ಮಾತನಾಡಿದಕ್ಕೆ ಮುಸ್ಲಿಂ ಯುವಕನ್ನು ಬಸ್‌ನಿಂದ ಎಳೆದು ತಂದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಏಪ್ರಿಲ್ 04ರಂದು ಮೊಹಮ್ಮದ್ ಜಹೀರ್(22) ಎಂಬ ಯುವಕ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ತನಗೆ ಪರಿಚಯವಿದ್ದ ಯುವತಿ ಕೂಡ ಅದೇ ಬಸ್ನಲ್ಲಿರುವುದನ್ನು ಕಂಡು ಮಾತನಾಡಿಸಿದ್ದ. ಇದನ್ನು ಕಂಡ ಗುಂಪೊಂದು ಯುವಕನನ್ನು ಬಸ್‌ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. “ಕ್ಷುಲ್ಲಕ ವಿಚಾರಕ್ಕೆ ಯುವಕ ಮತ್ತು ಕೆಲವರ ನಡುವೆ ಮಾರಾಮಾರಿ ನಡೆದಿದೆ” ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಜಹೀರ್ ನೀಡಿದ ದೂರಿನ ಆಧಾರದ ಮೇಲೆ ನಿತೇಶ್, ಸಚಿನ್, ದಿನೇಶ್ ಮತ್ತು ಅವಿನಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangaluru, Karnataka | Some people dragged a young man namely Mohammed Zahir out of a bus yesterday and assaulted him for talking to a young woman in the bus in Ujire of Dakshina Kannada district.
A scuffle broke out yesterday between a youth and his acquaintance over a trivial…
— ANI (@ANI) April 4, 2023
ಜಹೀರ್ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿ ಸಿಕ್ಕಲೆಂದು ಆಕೆಯ ಜೊತೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಿದ್ದ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದಾಳೆ. ಬಸ್ಸಿನಲ್ಲಿ ಇದ್ದವರು ಇದನ್ನು ಗಮನಿಸಿ ಉಜಿರೆಯ ಯುವಕರಿಗೆ ಮಾಹಿತಿ ನೀಡಿದ್ದಾರೆ. ಜಹೀರ್ ಇದ್ದ ಬಸ್ ಉಜಿರೆಗೆ ಬರುತ್ತಿದ್ದಂತೆ ಕಾದು ನಿಂತಿದ್ದ ಯುವಕರ ತಂಡ ಜಹೀರ್ನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಹಲ್ಲೆಗೆ ಒಳಗಾಗಿರುವ ಜಹೀರ್ ಬೆಳ್ತಂಗಡಿ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆ ಸಂಬಂಧ ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್.ಡಿ.ಪಿ ಐ ಪಕ್ಷದ ತಾಲೂಕು ಅಧ್ಯಕ್ಷ ನವಾಜ್ ಕಟ್ಟೆ ಹಾಗೂ ಇತರ ಮುಖಂಡರುಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನಿಗೆ ಧೈರ್ಯ ತುಂಬಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:10 am, Wed, 5 April 23