ಮಂಗಳೂರು: ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಡಿನಲ್ಲಿ ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಮೃತ ಮಹಿಳೆ ನಳಿನಿ ಎಂದು ಗುರುತಿಸಲಾಗಿದೆ. ನಳಿನಿ ಒಂದು ತಿಂಗಳಿಂದ ನಾಪತ್ತೆಯಾಗಿದ್ದರು. ಇದೀಗ, ನೇಣು ಬಿಗಿದ ಸ್ಥೀತಿಯಲ್ಲಿ ನಳಿನ ದೇಹದ ಅವೇಶಗಳು ಪತ್ತೆಯಾಗಿವೆ.

ಮಂಗಳೂರು: ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆ
ನಳಿನಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 04, 2024 | 11:43 AM

ಮಂಗಳೂರು, ನವೆಂಬರ್​ 04: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ (Woman) ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿವೆ. ಮಹಿಳೆಯ ತಲೆಗೂದಲು ನೇಣುಕುಣಿಕೆಯಲ್ಲಿ ಜೋತಾಡುತ್ತಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ನಳಿನಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ನಳಿನಿಯವರು ಉರ್ವ ನಿವಾಸಿ ಸಂಜೀವ ಎಂಬವರನ್ನು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು. ನಳಿನಿ ಅವರು ಆಗಾಗ ತನ್ನ ತಾಯಿ ಮನೆಗೆ ಹೋಗಿ ಬರುತ್ತಿದ್ದರು.

ನಳಿನಿ ಕಳೆದ ಒಂದು ತಿಂಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು. ಪತ್ನಿ ನಾಪತ್ತೆ ಕುರಿತು ಸಂಜೀವ ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆ ವಿಷಯ ತಿಳಿದ ನಳಿನಿ ತವರು ಮನೆಯವರೂ ಹುಡುಕಾಟ ನಡೆಸಿದ್ದಾರೆ. ಉರ್ವದ ಸಂಜೀವರವರ ಮನೆಯ ಸುತ್ತಮುತ್ತ ಹುಡುಕಾಡಿದ್ದಾರೆ.

ಇದನ್ನೂ ಓದಿ: ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ನಳಿನಿ ಮೃತದೇಹದ ಅವಶೇಷಯಾಗಿವೆ. ಮರವೊಂದಕ್ಕೆ ನೇಣಿನ ಹಗ್ಗದಲ್ಲಿ ತಲೆ ಕೂದಲು ಜೋತಾಡುತ್ತಿತ್ತು. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿವೆ.

ಸಾಲಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ

ಮಂಡ್ಯ: ಸಾಲಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಹಳೇಬೂದನೂರು ಗ್ರಾಮದ ಬಳಿ ನಡೆದಿದೆ. ತ್ಯಾಗರಾಜು (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತ್ಯಾಗರಾಜು ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜೂಜು ಚಟಕ್ಕೆ ದಾಸನಾಗಿದ್ದನು. ಇದರಿಂದ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದನು. ಕೋಟ್ಯಾಂತರ ರೂಪಾಯಿ ಸಾಲದ‌ ಸುಳಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದನು. ಸಾಲ ವಾಪಸ್ ಮಾಡಲಾಗದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡಿಸೇಲ್ ಲಾರಿ ಡಿಕ್ಕಿಯಾಗಿ ಅಪರಿಚಿತ ಮಹಿಳೆ ಸಾವು

ಕಲಬುರಗಿ: ನಗರದ ಖರ್ಗೆ ವೃತ್ತದ ಬಳಿ ಡೀಸೆಲ್ ಟ್ಯಾಂಕರ್​​ ಡಿಕ್ಕಿಯಾಗಿ ಅಪರಿಚಿತ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಹಿಳೆ ಡಿವೈಡರ್ ಬಳಿ ನಿಂತಿದ್ದಾಗ ಡೀಸೆಲ್​​​​​ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕಲಬುರಗಿ ಸಂಚಾರಿ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ