ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ

ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ (Mahesh Bus Travels) ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ
ಮೃತ ವ್ಯಕ್ತಿ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 01, 2023 | 10:03 PM

ಮಂಗಳೂರು, ಅ.01: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ (Mahesh Bus Travels) ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಪ್ರಕಾಶ್ ಶೇಖ(43) ಮೃತ ರ್ದುದೈವಿ.  ಖಾಸಗಿ ಬಸ್, ಟೂರಿಸ್ಟ್, ಲಾರಿ ಉದ್ಯಮದಲ್ಲಿ ಹೆಸರು ಮಾಡಿದ್ದ ಪ್ರಕಾಶ್ ಶೇಖ ಅವರು ನೂರಕ್ಕೂ ಅಧಿಕ ಬಸ್​ಗಳನ್ನು ಹೊಂದಿದ್ದರು. ಇನ್ನು ಮಂಗಳೂರು, ಉಡುಪಿಯಲ್ಲಿ  ಮಹೇಶ್ ಟ್ರಾವೆಲ್ಸ್ ಭಾರೀ ಪ್ರಸಿದ್ಧಿ ಗಳಿಸಿತ್ತು.  ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರ್ ಟೈರ್ ಸ್ಫೋಟ; ಡಿವೈಡರ್ ಗುದ್ದಿದ ಕಾರು

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಕಡಿಮೆಯಾಗಿತ್ತು. ಇದೀಗ ಬಿಡದಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಸೂರಿನಿಂದ ಬೆಂಗಳೂರು ಕಡೆ ಹೊರಟಿದ್ದ ಕಾರಿನ ಟೈರ್ ಸ್ಫೋಟಗೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಗಂಭೀರ ಗಾಯಗೊಂಡು ನರಳುತ್ತಿದ್ದ ಕಾರು ಚಾಲಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ಘಟನೆ ಕುರಿತು ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ

ಮೈಸೂರು ಹೊರವಲಯದಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

ಮೈಸೂರು: ತಾಲೂಕಿನ ಉಯಿಲಾಳು ಗ್ರಾಮದ ಬಳಿ ಇಟ್ಟಿದ್ದ ಬೋನಿಗೆ, ಹೆಣ್ಣು ಚಿರತೆಯೊಂದು ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಚಿರತೆ ಸೆರೆ ಉಪಟಳ ನೀಡುತ್ತಿದ್ದು, ಈ ಹಿನ್ನಲೆ  ಗ್ರಾಮದ ಖಾಸಗಿ ಫಾರ್ಮ್ ಹೌಸ್ ಆವರಣದಲ್ಲಿ ಕಳೆದ ಮೂರು ದಿನಗಳ ಹಿಂದೆ ಬೋನು ಇಡಲಾಗಿದ್ದು, ಇದೀಗ ಚಿರತೆ ಬಿದ್ದಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಕೆ.ಸುರೇಂದ್ರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 pm, Sun, 1 October 23