Students Kissing Video – ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್

| Updated By: ಗಂಗಾಧರ​ ಬ. ಸಾಬೋಜಿ

Updated on: Jul 21, 2022 | 11:54 AM

ನಗರದ ಸೇಂಟ್ ಅಲೋಸಿಯಸ್ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ. ಕಿಸ್ಸಿಂಗ್ ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿಕೊಂಡಿದ್ದರು. 

Students Kissing Video - ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್
ಪ್ರಾತಿನಿಧಿಕ ಚಿತ್ರ
Follow us on

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಿಸ್ಸಿಂಗ್  ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ. ಕಿಸ್ಸಿಂಗ್‌ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಎದುರೇ ಕಿಸ್ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ಪಂದ್ಯದ ನಿಯಮದಂತೇ ವಿದ್ಯಾರ್ಥಿ, ವಿದ್ಯಾರ್ಥಿನಿ ಎಲ್ಲರ ಎದುರೇ ಚುಂಬನ ಮಾಡಿದ್ದು, ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಂಗಳೂರು ಪೊಲೀಸರು ವಿಡಿಯೋದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ಅಲ್ಲದೇ ಈ ಚುಂಬನ ಸ್ಪರ್ಧೆಯ ವೇಳೆ ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವ ಬಗ್ಗೆಯೂ ಪೊಲೀಸರ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಕೇವಲ ಕಿಸ್ಸಿಂಗ್ ಅಲ್ಲದೇ ವಿದ್ಯಾರ್ಥಿಗಳ ಕಾಮಪುರಾಣ ಬಯಲಾಗಿದ್ದು, ಕಾಲೇಜು ಬಿಟ್ಟು ಕಿಸ್ಸಿಂಗ್ ಸ್ಪರ್ಧೆ ನಂತರ ದೈಹಿಕ ಸಂಪರ್ಕಕ್ಕೂ ಒಳಗಾಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಮೇಲೆ ಪೋಕ್ಸೋ ಕೇಸ್ ಸಾಧ್ಯತೆಯಿದ್ದು, ಲೈಂಗಿಕತೆಯಲ್ಲಿ ತೊಡಗಿದ ವಿದ್ಯಾರ್ಥಿಗಳ ಬಂಧನ ಸಾಧ್ಯತೆ ಎನ್ನಲಾಗುತ್ತಿದೆ.

ಯೂನಿಫಾರ್ಮ್​ನಲ್ಲಿಯೇ ವಿದ್ಯಾರ್ಥಿಗಳ ಕಿಸ್ಸಿಂಗ್​:

ವಿಡಿಯೋದಲ್ಲಿ ಕಾಣಿಸುವ ವಿದ್ಯಾರ್ಥಿನಿ ಯೂನಿಫಾರ್ಮ್​ ಧರಿಸಿದ್ದು, ಹೀಗಾಗಿ ಪೊಲೀಸರಿಗೆ ವಿದ್ಯಾರ್ಥಿಗಳು ಯಾವ ಕಾಲಜಿನವರು ಎಂಬ ಮಾಹಿತಿ ದೊರೆತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು ವಯಸ್ಕರೇ ಅಥವಾ 18 ವರ್ಷಕ್ಕಿಂತ ಕೆಳಗಿನವರೇ ಎಂಬ ಮಾಹಿತಿ ಸಹ ಖಚಿತವಾಗಿ ದೊರೆತಿಲ್ಲ ಎನ್ನಲಾಗುತ್ತಿದೆ. ಈ ವಿಡಿಯೋ ಕುರಿತು ಮಂಗಳೂರು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಸದ್ಯ ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

ಖಾಸಗಿ ರೂಮ್​​ನಲ್ಲಿ ವಿಡಿಯೋ ಸೆರೆ:

ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ಸೆರೆಹಿಡಿಯಲಾಗಿದ್ದು, ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದೆ. ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಸದ್ಯ ಮಂಗಳೂರು ಪೊಲೀಸರು ವಿದ್ಯಾರ್ಥಿನಿಯರು ‌ಮತ್ತು ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ.

Published On - 10:50 am, Thu, 21 July 22