AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರಿನ ಕಾವೂರಿನಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 'ಬಾಂಗ್ಲಾದೇಶದ ಪ್ರಜೆ' ಎಂದು ಆರೋಪಿಸಿ, ದಾಖಲೆ ಕೇಳಿ ತಕ್ಷಣ ನೀಡದ ಕಾರಣ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಆತನ ತಲೆಗೆ ಗಂಭೀರ ಗಾಯಗಳಾಗಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!
ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 12, 2026 | 12:28 PM

Share

ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.

ದಾಖಲೆ ತೋರಿಸುವಂತೆ ಒತ್ತಾಯ

ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಕಾವೂರಿನ ಬಳಿ ಸ್ಥಳೀಯರಾದ ಸಾಗರ್, ಧನುಷ್, ಲಾಲು ಅಲಿಯಾಸ್ ರತೀಶ್ ಹಾಗೂ ಮೋಹನ್ ಎಂಬ ನಾಲ್ವರು ಯುವಕರು ದಿಲ್ಶಾನ್​ನನ್ನು ತಡೆದು ನಿಲ್ಲಿಸಿ, ತಾನು ಭಾರತೀಯ ಪ್ರಜೆ ಎಂಬುದಕ್ಕೆ ದಾಖಲೆ ತೋರಿಸುವಂತೆ ಒತ್ತಾಯಿಸಿದ್ದಾರೆ. ದಿಲ್ಶಾನ್ ತಕ್ಷಣ ದಾಖಲೆ ತೋರಿಸದ ಹಿನ್ನೆಲೆಯಲ್ಲಿ ಆರೋಪಿಗಳು ಆತನ ಮೇಲೆ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ದಿಲ್ಶಾನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವ ಉಂಟಾಗಿದೆ.

ನಾಲ್ವರ ವಿರುದ್ಧ FIR

ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಒಬ್ಬ ಹಿಂದು ಮಹಿಳೆ ಮಧ್ಯ ಪ್ರವೇಶಿಸಿ ದಿಲ್ಶಾನ್ ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ಬಳಿಕ ದಿಲ್ಶಾನ್ ಮನೆಗೆ ತೆರಳಿದ್ದು, ನಂತರ ಕಾವೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ನಾಲ್ವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ