ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ

ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಜಯಶ್ರೀ(23)ಎಂಬ ಯುವತಿಯನ್ನ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 17, 2023 | 5:22 PM

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ ಅಪರಿಚಿತ ವ್ಯಕ್ತಿಯೊರ್ವ ಮನೆಯಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಚೂರಿಯಿಂದ ಇರಿದು ಜಯಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿದ್ದಾನೆ. ಈ ಕುರಿತು ಸಂಪ್ಯಾ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಬಂದಿರುವ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಬಂದಿದ್ದು ಘಟನೆಯ ಬಗ್ಗೆ ಮಾಹಿತಿ, ಸಾಕ್ಷ್ಯ ಕಲೆ ಹಾಕುತ್ತಿದೆ. ಘಟನಾ ಸ್ಥಳಕ್ಕೆ ದಕ್ಷಿಣಕನ್ನಡ ಎಸ್.ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿದ್ದಾರೆ.

ಇನ್ನು ಈ ಘಟನೆಯು ಮಧ್ಯಾಹ್ನ ಪೋಷಕರು ತೋಟದ ಕೆಲಸದಲ್ಲಿದ್ದಾಗ ನಡೆದಿದೆ. ಸ್ಥಳೀಯರು, ಕುಟುಂಬಸ್ಥರು ಯುವತಿಯನ್ನು ಆಸ್ಪತ್ರೆಗೆ ಸೇರಿಸುವ ದಾರಿ ಮಧ್ಯೆಯೇ ಯುವತಿ ಸಾವನ್ನಪ್ಪಿದ್ದಾಳೆ. ಈ ಪ್ರಕರಣ ಕುರಿತು ಪೋಷಕರು ನೀಡುವ ದೂರಿನಂತೆ ಪ್ರಕರಣ ದಾಖಲಿಸಲಾಗುವುದು. ಪ್ರಕರಣ ಸಂಬಂಧ ಕೆಲ ಸುಳಿವುಗಳು ಲಭ್ಯವಾಗಿದೆ. ಶೀಘ್ರವಾಗಿ ಪ್ರಕರಣವನ್ನು ಭೇದಿಸಲಾಗುವುದು ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಎಸ್.ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಆಕಸ್ಮಿಕ ಬೆಂಕಿ ತಗುಲಿ ಬಸ್ ಹಾಗೂ ಜೀಪ್ ಬೆಂಕಿಗಾಹುತಿ

ಧಾರವಾಡ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ ಆವರಣದಲ್ಲಿ ನಿಂತಿದ್ದ ಬಸ್ ಹಾಗೂ ಜೀಪ್​ಗೆ ಆಕಸ್ಮಿಕ ಬೆಂಕಿ ತಗುಲಿ 2 ವಾಹನಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ.

ಇದನ್ನೂ ಓದಿ:Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!

ಕೆನರಾ ಬ್ಯಾಂಕ್​ ಎಟಿಎಂ ಒಡೆದು 5 ಲಕ್ಷಕ್ಕೂ ಹೆಚ್ಚು ಹಣ ಕಳವು

ವಿಜಯಪುರ: ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಕೆನರಾ ಬ್ಯಾಂಕ್​ ಎಟಿಎಂ ಒಡೆದು 5 ಲಕ್ಷಕ್ಕೂ ಹೆಚ್ಚು ಹಣವನ್ನ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಶುರುಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:41 pm, Tue, 17 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ