AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ

ಮಂಗಳೂರಿನ ನಂತೂರು ವೃತ್ತದ ಬಳಿ ನಡೆದ ಭೀಕರ ಅಪಘಾತದಲ್ಲಿ 26 ವರ್ಷದ ಯುವತಿ ಖಾಸಗಿ ಬಸ್‌ಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಭಾವಿ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮದುವೆ ನಿಶ್ಚಿತವಾಗಿದ್ದ ಈಕೆಯ ಸಾವಿಗೆ ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ, ಕುಟುಂಬಸ್ಥರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ
ಭೀಕರ ಅಪಘಾತಕ್ಕೆ ಯುವತಿ ಬಲಿImage Credit source: Tv9 Kannada
ಅಶೋಕ್​ ಪೂಜಾರಿ
| Edited By: |

Updated on:Feb 05, 2026 | 3:23 PM

Share

ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್​ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ.

ಕುಡುಪು ಭಾಗಕ್ಕೆ ತೆರಳುತ್ತಿದ್ದ 22ನೇ ನಂಬರ್ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ದೀಪ್ತಿ ಹೊಟ್ಟೆ ಮೇಲೆ ಬಸ್​​ ಚಕ್ರ ಕರಿದಿದೆ. ಗಂಭೀರಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಖಾಸಗಿ ಬಸ್​ಗಳ ಆರ್ಭಟ ಖಂಡಿಸಿ ಆ್ಯಂಬುಲೆನ್ಸ್​ನಲ್ಲಿ ಮೃತದೇಹವನ್ನು ಠಾಣೆ ಬಳಿಗೆ ತಂದು ದೀಪ್ತಿ ಸಂಬಂಧಿಕರು, ಸಾರ್ವಜನಿಕರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ, ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ!

ಕಾರುಗಳ ನಡುವೆ ಸರಣಿ ಅಪಘಾತ: ನಾಲ್ವರಿಗೆ ಗಾಯ

ರಾಕೆಟ್ ವೇಗದಲ್ಲಿ ಬಂದ ಕಾರುಗಳ ನಡುವೆ ಸರಣಿ ಅಪಘಾತ ನಡೆದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್​​ ಸಮೀಪದ ಬನ್ನೇರುಘಟ್ಟ-ಜಿಗಣಿ ಮುಖ್ಯ ರಸ್ತೆಯ ಕೊಪ್ಪ ಗೇಟ್ ಬಳಿ ನಡೆದಿದೆ. ಜಿಗಣಿ ಕಡೆಯಿಂದ ಬರುತ್ತಿದ್ದ ಎರಡು ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂಬದಿಯ ಕಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ವಿರುದ್ಧ ದಿಕ್ಕಿಗೆ ತಿರುಗಿ ಮತ್ತೊಂದು ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:22 pm, Thu, 5 February 26

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!