
ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ.
ಕುಡುಪು ಭಾಗಕ್ಕೆ ತೆರಳುತ್ತಿದ್ದ 22ನೇ ನಂಬರ್ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ದೀಪ್ತಿ ಹೊಟ್ಟೆ ಮೇಲೆ ಬಸ್ ಚಕ್ರ ಕರಿದಿದೆ. ಗಂಭೀರಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಖಾಸಗಿ ಬಸ್ಗಳ ಆರ್ಭಟ ಖಂಡಿಸಿ ಆ್ಯಂಬುಲೆನ್ಸ್ನಲ್ಲಿ ಮೃತದೇಹವನ್ನು ಠಾಣೆ ಬಳಿಗೆ ತಂದು ದೀಪ್ತಿ ಸಂಬಂಧಿಕರು, ಸಾರ್ವಜನಿಕರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ, ಮಂಗಳೂರಿನ ಕದ್ರಿ ಸಂಚಾರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ!
ರಾಕೆಟ್ ವೇಗದಲ್ಲಿ ಬಂದ ಕಾರುಗಳ ನಡುವೆ ಸರಣಿ ಅಪಘಾತ ನಡೆದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ ಸಮೀಪದ ಬನ್ನೇರುಘಟ್ಟ-ಜಿಗಣಿ ಮುಖ್ಯ ರಸ್ತೆಯ ಕೊಪ್ಪ ಗೇಟ್ ಬಳಿ ನಡೆದಿದೆ. ಜಿಗಣಿ ಕಡೆಯಿಂದ ಬರುತ್ತಿದ್ದ ಎರಡು ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂಬದಿಯ ಕಾರಿಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ವಿರುದ್ಧ ದಿಕ್ಕಿಗೆ ತಿರುಗಿ ಮತ್ತೊಂದು ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:22 pm, Thu, 5 February 26