ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ

ಮಂಗಳೂರಿನ ಅಡ್ಯಾರ್​​ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿ, ಬೊಂಡ ಫ್ಯಾಕ್ಟರಿ ಬಂದ್ ಮಾಡುವಂತೆ ಆದೇಶಿಸಲಾಗಿದೆ.

ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ
ಬೊಂಡ ಫ್ಯಾಕ್ಟರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 12, 2024 | 2:30 PM

ಮಂಗಳೂರು, (ಏಪ್ರಿಲ್ 12): ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.  ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ.ತಿಮ್ಮಯ್ಯ, ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಏಪ್ರಿಲ್ 8ರಂದು ಬೊಂಡ ಫ್ಯಾಕ್ಟರಿಯಿಂದ ಎಳನೀರು ಖರೀದಿ ಮಾಡಿ ಸೇವಿಸಿದ್ದರು. ಬಳಿಕ ಏಪ್ರಿಲ್ 9ರಿಂದ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿದ್ದರು. ಅಡ್ಯಾರ್​​ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಸುತ್ತಮುತ್ತಲಿನ ನಿವಾಸಿಗಳು ಲೀಟರ್ ಲೆಕ್ಕದಲ್ಲಿ ಎಳನೀರು ಖರೀದಿಸಿದ್ದರು. ಬಳಿಕ ಅದನ್ನು ಸೇವಿಸಿದ ಬಳಿಕ ವಾಂತಿ. ಬೇಧಿ, ಜ್ವರ ಮತ್ತು ತಲೆನೋವಿನಿಂದ ಬಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು