Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ

ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ.

Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
Ganapathi Sharma
|

Updated on: Apr 17, 2023 | 3:48 PM

ಮಂಗಳೂರು: ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru international airport) ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ. ಆದರೆ, ಶುಲ್ಕ ತೆತ್ತು ಒಳ ಪ್ರವೇಶಿಸಬೇಕಾಗಲಿದೆ. ಸದ್ಯ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರಿಗೆ ಗ್ರೌಂಡ್​ ಫ್ಲೋರ್​ ಪ್ರವೇಶಿಸಲಷ್ಟೇ ಅನುಮತಿ ಇದೆ. ಅಲ್ಲಿಂದಲೇ ತಮ್ಮವರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಇದೆ.

ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್ ಒಳಗೆ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಪ್ರವೇಶಕ್ಕೆ ಅನುಮತಿಸಲು ವಿಮಾನ ನಿಲ್ದಾಣ ಆಡಳಿತ ಯೋಜನೆಯನ್ನು ರೂಪಿಸಲು ಯೋಜಿಸಿದೆ. ಮೂಲಗಳ ಪ್ರಕಾರ, ಸೇವೆಯನ್ನು ಪ್ರಾರಂಭಿಸಲು ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಸಿದ್ಧತೆಗಳು ಸಿಐಎಸ್‌ಎಫ್‌ನಿಂದ ಭದ್ರತಾ ಅನುಮೋದನೆ, ಪ್ರಯಾಣಿಕರನ್ನು ಕರೆದೊಯ್ಯಲು ಬವರುವವರ ಗ್ಯಾಲರಿಗಾಗಿ ಗೊತ್ತುಪಡಿಸಿದ ಸ್ಥಳವನ್ನು ನಿಗದಿಪಡಿಸುವಂತಹ ವಿಚಾರಗಳನ್ನು ಒಳಗೊಂಡಿದೆ ಎನ್ನಲಾಗಿದೆ. ವಿಮಾನ ನಿಲ್ದಾಣ ಆಡಳಿತವು ಈಗಾಗಲೇ ಅರೈವಲ್ ಲಾಬಿಯ ಹೊರಗೆ ಕಿಯೋಸ್ಕ್ ಅನ್ನು ಸ್ಥಾಪಿಸಿದ್ದು ಪ್ರತಿ ಟಿಕೆಟ್‌ಗೆ ಸುಮಾರು 100 ರೂ ನಿಗದಿಪಡಿಸಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಟರ್ಮಿನಲ್ ಪ್ರವೇಶಕ್ಕೆ ಸಂಬಂಧಿಸಿದ ಸೇವೆಯ ವಿವರಗಳು ಶೀಘ್ರದಲ್ಲೇ ಲಭ್ಯವಾಗಲಿವೆ. ಸೇವೆಯನ್ನು ಪ್ರಾರಂಭಿಸಿದ ನಂತರ, ಜನರು ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್‌ನಲ್ಲಿ ಭೇಟಿಯಾಗಲು ಅವಕಾಶವನ್ನು ಪಡೆಯುತ್ತಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ 2022-23ನೇ ಹಣಕಾಸು ವರ್ಷದಲ್ಲಿ ಶೇ 76ರಷ್ಟು ಹೆಚ್ಚಾಗಿರುವುದು ಇತ್ತೀಚೆಗೆ ತಿಳಿದುಬಂದಿತ್ತು. ಈ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 17,94,054 ಮಂದಿ ಪ್ರಯಾಣಿಸಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ 10,16,559 ಮಂದಿ ಪ್ರಯಾಣಿಸಿದ್ದರು ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದರು. ಒಟ್ಟಾರೆಯಾಗಿ 17.94 ಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದು ಈ ಪೈಕಿ 12.08 ಲಕ್ಷ ಮಂದಿ ದೇಶೀಯ ಪ್ರಯಾಣಿಕರಾಗಿದ್ದಾರೆ. 5.86 ಲಕ್ಷ ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದು, ಮುಖ್ಯವಾಗಿ ಗಲ್ಫ್ ದೇಶಗಳಿಗೆ ಪ್ರಯಾಣಿಸಿದವರು ಎಂದು ಅವರು ಮಾಹಿತಿ ನೀಡಿದ್ದರು. ಇದರೊಂದಿಗೆ ಮಂಗಳೂರು ವಿಮಾನ ನಿಲ್ದಾಣದ ಜನಪ್ರಿಯತೆ ಹೆಚ್ಚುತ್ತಿರುವುದು ತಿಳಿದುಬಂದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ