Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಸ್ಫೋಟದ ಹೊಣೆ ಹೊತ್ತ ISIS ಉಗ್ರ ಸಂಘಟನೆ

ಮಂಗಳೂರಿನ  ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ.

Mangaluru: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಸ್ಫೋಟದ ಹೊಣೆ ಹೊತ್ತ ISIS ಉಗ್ರ ಸಂಘಟನೆ
ಕುಕ್ಕರ್ ಬಾಂಬ್ ಸ್ಫೋಟ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 05, 2023 | 4:36 PM

ಮಂಗಳೂರು: ಮಂಗಳೂರಿನ  ಕಂಕನಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್​ ಸ್ಫೋಟ (Mangaluru Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್ (ISIS)​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆyಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ. ಇತ್ತೀಚೆಗೆ ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

ಕದ್ರಿಯಲ್ಲಿರುವ ಹಿಂದುತ್ವ ದೇವಾಲಯದ ಮೇಲೆ ದಾಳಿ ಮಾಡಲು ನಮ್ಮ ಸಹೋದರ ಪ್ರಯತ್ನಿಸಿದ್ದ ಈ ಕಾರ್ಯಾಚರಣೆಯಲ್ಲಿ ಅದು ಯಶಸ್ವಿಯಾಗಲಿಲ್ಲ. ರಾಜ್ಯ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ನಮ್ಮ ಇತರ ಸೋದರರನ್ನು ಬಂಧಿಸಲು ಯತ್ನಿಸುತ್ತಿವೆ, ಹಿಂಬಾಲಿಸುತ್ತಿವೆ. ಆದರೆ ಅವರಿಂದ ತಪ್ಪಿಸಿಕೊಳ್ಳಲು ನಾವು ಸಫಲರಾಗಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಶಾರಿಕ್ ಗುಣಮುಖ, ಬೆಂಗಳೂರಿಗೆ ಶಿಫ್ಟ್, ಲಾಡ್ಜ್ ಗೆ ಬರುತ್ತಿತ್ತು ಸ್ಪೋಟಕ ವಸ್ತುಗಳು

ಘಟನೆಯ ಸಮಗ್ರ ನೋಟ

ನವೆಂಬರ್ 19. 2022 ರಂದು ಮಂಗಳೂರಿನಲ್ಲಿ ಸ್ಪೋಟಗೊಂಡ ಬಾಂಬ್ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಪೋಟದಿಂದ ಬಯಲಾಗಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಪೋಟಗೊಂಡು ಆತ ಅಲ್ಲೇ ತಗ್ಲಾಕ್ಕೊಂಡಿದ್ದ. ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಯಾವಾಗ ಅರೆಸ್ಟ್ ಆಗುತ್ತಾನೊ ಆಗ ಶಾರಿಕ್ ಅಲ್ಲಿಂದ ಕಾಲ್ಕಿತ್ತಿದ್ದ. ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿಕೊಂಡಿದ್ದ. ಹಿಂದೂ ವೇಶ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ.

ಇನ್ನು ಮೈಸೂರಿನ ತನ್ನ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರು ಮಾಡಿದ್ದ. ಅಲ್ಲಿಂದ ಮಂಗಳೂರಿಗೆ ತಂದು ಸಿಡಿಸುವ ಪ್ಲಾನ್ ಇತ್ತು. ನವೆಂಬರ್ 19 ರ ಬೆಳಗ್ಗೆ ಮೈಸೂರಿನಿಂದ ತಾನು ತಯಾರಿಸಿದ್ದ ಕುಕ್ಕರ್ ಬಾಂಬ್ ಸಮೇತ ಮಂಗಳೂರಿನ ಕಡೆ ಹೊರಟಿದ್ದ. ಮೈಸೂರಿನ ತನ್ನ ಬಾಡಿಗೆ ಮನೆಯಿಂದ ಆಟೋದಲ್ಲಿ ಬಾಂಬ್​ನ್ನು ಇಟ್ಟುಕೊಂಡು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್​ಗೆ ಬಂದಿಳಿದಿದ್ದ. ಮೈಸೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ 20 ನಿಮಿಷ ಬಸ್​ಗೆ ಕಾದಿದ್ದ.

ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಅಲ್ಲಿಂದ ನೇರವಾಗಿ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್​ಗೆ ಹತ್ತಿದ್ದ. ಅಲ್ಲಿಂದ ಕುಶಾಲನಗರ, ಮಡಿಕೇರಿ, ಸುಳ್ಯ, ಪುತ್ತೂರು ಮಾರ್ಗವಾಗಿ ಬಂದು ಮಂಗಳೂರಿನ ಪಡೀಲಿನಲ್ಲಿ ಇಳಿದಿದ್ದ. ಇದಕ್ಕೂ ಮುನ್ನ ತಾನು ತಂದಿದ್ದ ಬಾಂಬ್ ಜೊತೆ ಊಟಕ್ಕಾಗಿ ಬಸ್ ಬ್ರೇಕ್ ಕೊಟ್ಟಾಗ ಹೋಟೆಲ್ ಒಳಗೂ ಬಾಂಬ್ ತೆಗೆದುಕೊಂಡು ಹೋಗಿದ್ದ. ಇನ್ನು ಮಂಗಳೂರಿನ ಪಡೀಲು ಬಳಿ ಇಳಿದವನೆೇ ಪಂಪ್ ವೆಲ್ ಕಡೆ ಅರ್ಧ ಕಿಲೋ ಮೀಟರ್ ನಡೆದುಕೊಂಡು ಬಂದಿದ್ದ.

ಬಳಿಕ ಕುಕ್ಕರ್ ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿಕೊಂಡು ಆಟೋ ಹತ್ತಿದ್ದ. ಪಂಪ್ ವೆಲ್ ಡ್ರಾಪ್ ಅಂತಾ ಹೇಳಿ ಆಟೋ ಹತ್ತಿದ್ದು, ಆಟೋ ಪಂಪ್ ವೆಲ್ ತಲುಪೊ ಮಧ್ಯದಲ್ಲೇ ಬಾಂಬ್​ನಲ್ಲಿದ್ದ ಝೆಲ್​ಗೆ ಬೆಂಕಿ ಹೊತ್ತಿಕೊಂಡು ಬ್ಲಾಸ್ಟ್ ಆಗಿತ್ತು. ಆದ್ರೆ ಡಿಟೊನೇಟರ್ ಮೂಲಕ ಬ್ಲಾಸ್ಟ್ ಆಗದೆ ಇದ್ದಿದ್ರಿಂದ ಆಗೋ ಭಾರೀ ಅನಾಹುತ ತಪ್ಪಿತ್ತು.

ಇನ್ನು ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಟಾರ್ಗೆಟ್ ಇಟ್ಟಿದ್ದ. ಪ್ರಮುಖವಾಗಿ ಕದ್ರಿ ದೇವಸ್ಥಾನಕ್ಕೆ ಬಾಂಬ್ ಇಡುವ ಪ್ಲಾನ್ ಇತ್ತು. ಇದು ಮಿಸ್ಸಾದ್ರೆ ಬೇರೆ ಕಡೆ ಇಡುವ ಪ್ಲಾನ್ ಹೊಂದಿದ್ದ. ಇನ್ನು ಇಷ್ಟೆಲ್ಲಾ ಅಂಶಗಳು ಪೊಲೀಸರು ಮತ್ತು ಎನ್.ಐ.ಎ ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ತಿಳಿದು ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:34 pm, Sun, 5 March 23