Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕೋಟೆಕಾರು ಬ್ಯಾಂಕ್​ ಕಳ್ಳತನ: ದರೋಡೆಕೋರರ ಚಲನವಲನ ಪತ್ತೆ

ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್​ನಲ್ಲಿ ನಡೆದಿದ್ದ ದರೋಡೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಳವಾದ ವಸ್ತುಗಳ ಪೈಕಿ 11 ಲಕ್ಷ ರೂ. ನಗದು ಇದ್ದರೆ, ಇನ್ನುಳಿದಿದ್ದು ಚಿನ್ನಾಭರಣ. ಒಟ್ಟು 12 ಕೋಟಿ ರೂ. ನಗನಾಣ್ಯ ಲೂಟಿ ಮಾಡಿರುವ ಬಗ್ಗೆ ಅಂದಾಜಿಸಲಾಗಿದೆ. ದರೋಡೆಕೋರರು ಕದ್ದ ಹಣ ಮತ್ತು ಚಿನ್ನದ ಸಮೇತ ಎಲ್ಲಿ ಅಡಕೊಂಡಿದ್ದಾರೆ ಎಂಬ ಮಾಹಿತಿ ಮಂಗಳೂರು ಪೊಲೀಸರಿಗೆ ತಿಳಿದೆ. ಈ ಬಗ್ಗೆ ವಿವರ ಇಲ್ಲಿದೆ.

ಮಂಗಳೂರು ಕೋಟೆಕಾರು ಬ್ಯಾಂಕ್​ ಕಳ್ಳತನ: ದರೋಡೆಕೋರರ ಚಲನವಲನ ಪತ್ತೆ
ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ. ರೋಡ್ ಜಂಕ್ಷನ್​ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜ.17ರಂದು ದರೋಡೆ ನಡೆದಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದಲ್ಲಿ ಮುಂಬೈನ ಚೆಂಬೂರ್ ತಿಲಕ ನಗರದ ಕಣ್ಣನ್ ಮಣಿ (36), ಪದ್ಮನೇರಿ ಗ್ರಾಮದ ಮುರುಗುಂಡಿ ಥೇವರ್ (36), ಮುಂಬೈನ ದೊಂಬಿವಲಿ ವೆಸ್ಟ್‌ನ ಯೊಸುವಾ ರಾಜೇಂದ್ರನ್ (35), ಷಣ್ಣುಗ ಸುಂದರಂ ಎಂಬುವರನ್ನು ಬಂಧಿಸಲಾಗಿದೆ.
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ

Updated on:Jan 19, 2025 | 11:55 AM

ಮಂಗಳೂರು, ಜನವರಿ 19: ಮಂಗಳೂರಿನ (Mangaluru) ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್​ನಲ್ಲಿ ನಡೆದಿದ್ದ ದರೋಡೆ (Bank Robarry) ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9ಗೆ ಎಕ್ಸ್ಲೂಸಿವ್ ಮಾಹಿತಿ ದೊರೆತಿದೆ. ದರೋಡೆಕೋರರು ಕೇರಳ ಅಥವಾ ತಮಿಳುನಾಡಿನಲ್ಲಿ ಅಂಡರ್​ಗ್ರೌಂಡ್​ ಆಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಆದರೆ, ಇದೀಗ ದರೋಡೆಕೋರರ ಚಲನವಲನ ಪತ್ತೆ ಹಚ್ಚಿದ ಪೊಲೀಸರು ಅವರು ಉತ್ತರ ಭಾರತದತ್ತ ತೆರಳಿದ್ದಾರೆ ಎಂದು ತಿಳಿದಿದೆ.

ದರೋಡೆಕೋರರು ರೈಲಿನಲ್ಲಿ ಉತ್ತರ ಭಾರತದ ಕಡೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಬೆಂಗಳೂರಿನಿಂದ ವಿಮಾನದಲ್ಲಿ ಉತ್ತರ ಭಾರತದತ್ತ ಹೊರಟಿದ್ದಾರೆ.

ಇದನ್ನೂ ಓದಿ: ಉಳ್ಳಾಲ ಕೋಟೆಕಾರು ಬ್ಯಾಂಕ್ ದರೋಡೆ: ತನಿಖೆಯ ದಿಕ್ಕು ತಪ್ಪಿಸಲು ದುಷ್ಕರ್ಮಿಗಳ ಖತರ್ನಾಕ್ ಪ್ಲಾನ್ ಹೀಗಿತ್ತು!

ಕದ್ದ ಚಿನ್ನ ಸಾಗಿಸಿದ್ದ ಕಾರು ಯಾವುದು?

ಆರೋಪಿಗಳು ಕದ್ದ ಚಿನ್ನವನ್ನು ಸಾಗಿಸಿದ್ದು ಫಿಯೆಟ್ ಕಾರಿನಲ್ಲಿ ಸಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಆರೋಪಿಗಳು ಕದ್ದ ಚಿನ್ನವನ್ನು ಮತ್ತೊಂದು ಕಾರು ಚೆವ್ರೊಲೆಟ್​ನಲ್ಲಿ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಕಡೆ ಚೆವ್ರೊಲೆಟ್ ಕಾರಿನಲ್ಲಿ ಬಂದ ಮೂವರು ದರೋಡೆಕೋರರು ಬ್ಯಾಂಕ್ ದರೋಡೆ ಮಾಡಿ, ಮಂಗಳೂರಿನಲ್ಲಿ ಮೊಬೈಲ್ ಬಿಸಾಕಿ ಬಂಟ್ವಾಳ ಕಡೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಬಿ.ಸಿ‌.ರೋಡ್ ಟೋಲ್ ಹಾಗೂ ಸಿಸಿಟಿವಿ ತಪ್ಪಿಸಲು ಟೋಲ್​ನ ಪಕ್ಕದ ರಸ್ತೆ ಮೂಲಕ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಬಳಿಕ ವಿಟ್ಲ ಮೂಲಕ ಕೇರಳ ಗಡಿ ತಲುಪಿ ಕೇರಳದ ಗ್ರಾಮೀಣ ಪ್ರದೇಶ ತಲುಪಿರುವ ಸಾದ್ಯತೆ ಇದೆ. ಎರಡು ದಿಕ್ಕಿನಲ್ಲಿ ಸಾಗಿದ ಕಾರುಗಳು ಕೆಲವೇ ಗಂಟೆಗಳಲ್ಲಿ ಕೇರಳದಲ್ಲೇ ಸಂದಿಸಿರುವ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಈ ನಿಟ್ಟಿನಲ್ಲಿ ಪೊಲೀಸರ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ.

ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ

ದರೋಡೆಕೋರರ ಬಗ್ಗೆ ಲಭ್ಯವಾದ ಮಾಹಿತಿಗಳ ಆಧಾರದ ಮೇಲೆ ಮಂಗಳೂರು ಪೊಲೀಸರು ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣೆಗೆ ಕರೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಇಬ್ಬರು 2017ರ ದರೋಡೆ ಪ್ರಕರಣದ ಆರೋಪಿಗಳಾಗಿದ್ದರು. ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಸಿಸಿಬಿ ಸೇರಿ ವಿವಿಧ ಠಾಣೆಗಳ ಪೊಲೀಸರ ಎಂಟು ತಂಡ ಪ್ರಕರಣದ ತನಿಖೆ ನಡೆಸುತ್ತಿವೆ.

ಉಳ್ಳಾಲ, ತೊಕ್ಕೊಟ್ಟು ಪ್ರದೇಶದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಜೊತೆಗೆ ಸಿಸಿಟಿವಿ ದಾಖಲೆ ಹಾಗೂ ಇತರೆ ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರ ತಂಡಗಳು ಕೇರಳ, ತಮಿಳುನಾಡು, ಮುಂಬೈ, ಗೋವಾದಲ್ಲಿ ಬೀಡು ಬಿಟ್ಟಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಂದ ಜಾಗೃತಿ ಸಭೆ

ದರೋಡೆ ಬಳಿಕ ಎಚ್ಚೆತ್ತುಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ರಾಷ್ಟ್ರೀಕೃತ ಬ್ಯಾಂಕ್​ಗಳು, ಸಹಕಾರಿ ಬ್ಯಾಂಕ್ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದಾರೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮುಖ್ಯಸ್ಥರು, ಅಧಿಕಾರಿಗಳ ಜೊತೆ ಆಯಾ ಠಾಣಾಧಿಕಾರಿಗಳು ಸಭೆ ನಡೆಸಿದರು. ಬ್ಯಾಂಕ್ ಭದ್ರತೆ ಕುರಿತು ಸೂಕ್ತ ಕಾನೂನು ತಿಳಿವಳಿಕೆ ನೀಡಿದರು. ಎಲ್ಲ ಬ್ಯಾಂಕ್​​ಗಳ ಭದ್ರತೆ ಖಾತ್ರಿಪಡಿಸುವಂತೆ ಸೂಚನೆ ನೀಡಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:54 am, Sun, 19 January 25

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ