ಮಂಗಳೂರು: ಬಿಸಿ ರೋಡ್ ಮತ್ತೆ ಉದ್ವಿಗ್ನ, ಮುಸ್ಲಿಂ ಬೈಕ್​ ರ‍್ಯಾಲಿಗೆ ಅವಕಾಶ ನೀಡಿದ್ದಕ್ಕೆ ಹಿಂದೂ ಕಾರ್ಯಕರ್ತರ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರೋಡ್​​ನಲ್ಲಿ ಕೊನೆಗೂ ಶಾಂತಿ ನೆಲೆಸಿತು ಎನ್ನುವಷ್ಟರಲ್ಲೇ ಮುಸ್ಲಿಂ ಯುವಕರ ಬೈಕ್ ಜಾಥಾಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದು, ಉದ್ವಿಗ್ನತೆ ಸೃಷ್ಟಿಸಿದೆ. ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುಕವರು ಹಿಂದೂ ಕಾರ್ಯಕರ್ತರನ್ನು ಕೆರಳಿಸುಂತೆ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಹಿಂದೂಗಳ ಪ್ರತಿಭಟನೆ ಮುಂದುವರಿದಿದೆ.

ಮಂಗಳೂರು: ಬಿಸಿ ರೋಡ್ ಮತ್ತೆ ಉದ್ವಿಗ್ನ, ಮುಸ್ಲಿಂ ಬೈಕ್​ ರ‍್ಯಾಲಿಗೆ ಅವಕಾಶ ನೀಡಿದ್ದಕ್ಕೆ ಹಿಂದೂ ಕಾರ್ಯಕರ್ತರ ಆಕ್ರೋಶ
ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಬಿಗಿ ಬಂದೋಬಸ್ತ್
Follow us
| Updated By: ಗಣಪತಿ ಶರ್ಮ

Updated on: Sep 16, 2024 | 12:02 PM

ಮಂಗಳೂರು, ಸೆಪ್ಟೆಂಬರ್ 16: ಮುಸ್ಲಿಂ ಮತ್ತು ಹಿಂದೂ ನಾಯಕರ ಪ್ರಚೋದನಾಕಾರಿ ಹೇಳಿಕೆಗಳಿಂದ ಮತ್ತು ನಡೆಗಳಿಂದ ಉದ್ವಿಗ್ನಗೊಂಡಿದ್ದ ಬಿಸಿ ರೋಡ್​ನಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸೋಮವಾರ ಬೆಳಗ್ಗೆ ಯಶಸ್ವಿಯಾಗಿದ್ದರು. ಆದರೆ, ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅವಕಾಶ ಕೊಟ್ಟಿದ್ದು ಮತ್ತೆ ಪರಿಸ್ಥಿತಿ ಹದಗೆಡುವಂತೆ ಮಾಡಿದೆ.

ಮುಸ್ಲಿಂ ಬೈಕ್​ ರ‍್ಯಾಲಿಗೆ ಅವಕಾಶ ನೀಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ನಮಗೆ ಮೆರವಣಿಗೆಗೆ ಅನುಮತಿ ನೀಡಿಲ್ಲ. ಹೀಗಿರುವಾಗ ಅವರಿಗೆ (ಮುಸ್ಲಿಮರಿಗೆ) ಹೇಗೆ ಅನುಮತಿ ಕೊಟ್ಟಿರಿ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಪೊಲೀಸರ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕಿಡಿ ಕಾರಿದ್ದು, ನಾವು ಸಂಜೆವರೆಗೂ ಇಲ್ಲಿಂದ ಹೋಗುವುದಿಲ್ಲ. ಇಲ್ಲೇ ಇರುತ್ತೇವೆ ಎಂದು ಪಟ್ಟುಹಿಡಿದಿದ್ದಾರೆ. ಮುಸ್ಲಿಮರಿಗೆ ಏಕಾಏಕಿ ಬೈಕ್​ ರ‍್ಯಾಲಿಗೆ ಅವಕಾಶ ನೀಡಿದ್ದೀರಿ. ನಮಗೂ ರ‍್ಯಾಲಿಗೆ ಅವಕಾಶ ನೀಡಿ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಮುಸ್ಲಿಂ ಯುವಕರು ಜೋರಾಗಿ ಹಾರ್ನ್ ಮಾಡುತ್ತಾ, ಜೋರಾಗಿ ಎಕ್ಸಲೇಟರ್ ಕೊಟ್ಟು ಹಿಂದೂ ಕಾರ್ಯಕರ್ತರ ಸಮೀಪದಲ್ಲೇ ಅಣಕಿಸುತ್ತಾ ಮುಂದೆ ಸಾಗಿದ್ದು, ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿತು. ಇದರಿಂದ ಆಕ್ರೋಶಗೊಂಡ ಹಿಂದು ಸಂಘಟನೆ ಕಾರ್ಯಕರ್ತರು ಭಗವಾಧ್ವಜ ಪ್ರದರ್ಶಿಸಿದರು.

‘ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆ ತಡೆಯಿರಿ’ ಎಂದು ವಿಹೆಚ್​​ಪಿ ಮುಖಂಡ ಶರಣ್ ಪಂಪ್​​ವೆಲ್​ಗೆ ಸವಾಲು ಹಾಕಿದ್ದವರಿಬ್ಬರನ್ನು ಸೋಮವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ವಿಎಚ್​​ಪಿ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧವೂ ಪ್ರಕರಣ ದಾಖಲಿಸಿದ್ದರು.

ಮಸೀದಿ ಮೇಲೆ ಕಲ್ಲುತೂರಾಟ‌: 6 ಮಂದಿಯ ಬಂಧನ

ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ಮಸೀದಿ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ಮಾಡಿದ್ದ ಪ್ರಕರಣದಲ್ಲಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭರತ್, ಚೆನ್ನಪ್ಪ, ನಿತಿನ್, ಸುಜಿತ್, ಮನು, ಪ್ರೀತಮ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು ಹೊರವಲಯದ ಕಾಟಿಪಳ್ಳ 3 ನೇ ಬ್ಲಾಕಿನ ಬದ್ರಿಯಾ ಮಸೀದಿ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿತ್ತು. ಬೈಕ್​​ನಲ್ಲಿ ಬಂದ ತಂಡ ಕಲ್ಲು ತೂರಾಟ ನಡೆಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ