AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಐಸಿಸ್ ಉಗ್ರಗಾಮಿ ಸಂಘಟನೆಯ ನಂಟು ಹೊಂದಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾನೆ. ಅವರೇ ಇವನ ಹ್ಯಾಂಡ್ಲರ್​ಗಳು ​ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.

Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ
ಅಲೋಕ್ ಕುಮಾರ್, ಎಡಿಜಿಪಿ
TV9 Web
| Edited By: |

Updated on:Nov 22, 2022 | 9:19 AM

Share

ಮಂಗಳೂರು: ಐಸಿಸ್ (Islamic State) ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾಗಿರುವ, 2020ರಿಂದ ನಾಪತ್ತೆಯಾಗಿರುವ ಮೂವರು ವ್ಯಕ್ತಿಗಳು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಖ್​ಗೆ ತಾಂತ್ರಿಕ ಹಾಗೂ ಹಣಕಾಸು ನೆರವು ನೀಡಿರಬಹುದು. ಅವರೇ ಈತನ ‘ಹ್ಯಾಂಡ್ಲರ್​’ ಸಹ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸ್ ಪರಿಭಾಷೆಯಲ್ಲಿ ‘ಹ್ಯಾಂಡ್ಲರ್’ ಎಂದರೆ ಉಗ್ರಗಾಮಿ ಚಟುವಟಿಕೆ ನಡೆಸಲು ಗುರುತಿಸಿದ ವ್ಯಕ್ತಿಯ ಕಾರ್ಯನಿರ್ವಹಣೆಯನ್ನು ದೂರದಿಂದಲೇ ನಿಯಂತ್ರಿಸುವುದು ಎಂಬ ಅರ್ಥವಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್ ಸ್ವತಃ  ಈ ಅನುಮಾನ ವ್ಯಕ್ತಪಡಿಸಿದರು. ಐಸಿಸ್ ಜೊತೆಗೆ ನಂಟು ಹೊಂದಿರುವ ಶಂಕೆ ಇರುವ ಮುಸಾಬಿರ್ ಹುಸೇನ್, ಅಬ್ದುಲ್ ಮಥೀನ್ ತಾಹಾ ಮತ್ತು ಅರಾಫತ್ ಅಲಿ ಜಂಟಿಯಾಗಿ ಶಾರಿಕ್​ನ ಚಟುವಟಿಕೆಗಳನ್ನು ನಿರ್ವಹಿಸಿರುವ ಸಾಧ್ಯತೆಯಿದೆ. ಅವರೇ ಶಾರಿಕ್​ಗೆ ಹಣಕಾಸು ಹೊಂದಿಸಿಕೊಡುವುದರ ಜೊತೆಗೆ ಹ್ಯಾಂಡ್ಲರ್​ಗಳಾಗಿಯೂ ಕಾರ್ಯನಿರ್ವಹಿಸಿರಬಹುದು ಎಂದು ತಿಳಿಸಿದರು.

ಶಾರಿಕ್​ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಾಸಿ ಎಂದು ಸ್ಪಷ್ಟವಾಗಿದೆ. ಈತನ ಮೇಲೆ ಈ ಮೊದಲು ಮೂರು ಪ್ರಕರಣಗಳು ದಾಖಲಾಗಿವೆ. ಮುಸಾಬಿರ್ ಹುಸೇನ್ ಮತ್ತು ಮಥೀನ್ ತಾಹಾ ವಿರುದ್ಧ 2020ರಲ್ಲಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಗೋಡೆ ಬರಹ ಪ್ರಕರಣದಲ್ಲಿ ತಲೆಮರೆಸಿಕೊಂಡ ಅರಾಫತ್ ಅಲಿ ದುಬೈನಲ್ಲಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಾಲ್ವರನ್ನು ಬಂಧಿಸಲಾಗಿದೆ. ಮೈಸೂರಿನ ಇಬ್ಬರು, ಮಂಗಳೂರಿನ ಒಬ್ಬ ಹಾಗೂ ಊಟಿಯಿಂದ ಒಬ್ಬನನ್ನು ಬಂಧಿಸಿ ಕರೆತರಲಾಗಿದೆ ಎಂದರು.

ಕೊಯಮತ್ತೂರು, ಕೇರಳ, ತಮಿಳುನಾಡು ತಿರುಗಾಡಿ ಕಳೆದ ಸೆ.20ರಂದು ಮೈಸೂರಿಗೆ ಶಾರಿಕ್ ಬಂದಿದ್ದ. ಮೈಸೂರಿನ​ ಲೋಕ ನಾಯಕ ನಗರದಲ್ಲಿ ಮೋಹನ್‍ಕುಮಾರ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದನು. ಮನೆ ಮಾಲೀಕರಿಗೆ ಈತನ ಬಗ್ಗೆ ಗೊತ್ತಿರಲಿಲ್ಲ. ಹುಬ್ಬಳ್ಳಿ-ಧಾರವಾಡ ನಿವಾಸಿ ಪ್ರೇಮ್‍ರಾಜ್ ಎಂಬ ಆಧಾರ್ ಕಾರ್ಡ್ ಹೊಂದಿದ್ದನು ಎಂದು ಹೇಳಿದರು.

ಶಾರಿಕ್ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದರಿಂದ ಆತ ಬ್ಲಾಸ್ಟ್​​ಗೆ ಸಂಬಂಧಿಸಿದ ಸಾಧನಗಳನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದನು ಎಂಬುವುದನ್ನು ತಿಳಿಯಬೇಕಾಗಿದೆ. ಬ್ಲಾಸ್ಟ್​​ಗೂ ಮುನ್ನ ಶಾರಿಕ್​ ನವೆಂಬರ್ 10 ರಂದು ಮಂಗಳೂರಿಗೆ ಭೇಟಿ ನೀಡಿದ್ದನು. ಘಟನೆಯಲ್ಲಿ ಕೆಲ ಸ್ಥಳೀಯರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ ಎಂದು ಅಲೋಕ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 am, Tue, 22 November 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು