AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ

ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.

Mangaluru Blast: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ
ಎನ್​ಐಎ ಅಧಿಕಾರಿಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 01, 2022 | 9:37 AM

Share

ಮಂಗಳೂರು: ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.

ಎನ್​ಐಎ ಅಧಿಕಾರಿಗಳ ತನಿಖೆ ಇಂದಿನಿಂದ ಆರಂಭವಾಗಲಿದೆ. ಈಗಾಗಲೇ ಪೊಲೀಸರು ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್​ ಎನ್​.ಶಶಿಕುಮಾರ್​​, ತನಿಖಾಧಿಕಾರಿ ಪಿ.ಎ.ಹೆಗ್ಡೆ ನೇತೃತ್ವದಲ್ಲೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ತನಿಖಾ ತಂಡ ಶಾರಿಕ್ ಹೇಳಿಕೆ ವಿಡಿಯೋ ರೆಕಾರ್ಡ್ ಮಾಡಿದೆ. NIA ಅಧಿಕಾರಿಗಳು ಇಂದಿನಿಂದ ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ.

ಇದನ್ನೂ ಓದಿ: ಆಟೋದಲ್ಲಿ ನಿಗೂಢ ಸ್ಪೋಟ: ಪ್ರಯಾಣಿಕ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದರು – ಎಡಿಜಿಪಿ ಅಲೋಕ್​​ಕುಮಾರ್

ಕಳೆದ ತಿಂಗಳ ನವೆಂಬರ್​ 20ರಂದು ಮಂಗಳೂರಿನ ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್‌, ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಶಾರಿಕ್ ಒಬ್ಬ ಶಂಕಿತ ಉಗ್ರನೆಂಬ ಬಗ್ಗೆ ಬಲವಾದ ಸಾಕ್ಷ್ಯಗಳು, ಅನುಮಾನಗಳು ವ್ಯಕ್ತವಾದವು. ದಿನದಿಂದ ದಿನಕ್ಕೆ ಈ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಇದನ್ನೂ ಓದಿ: ಕರಾವಳಿ ಭಾಗದ 3 ಪ್ರಸಿದ್ಧ ದೇವಾಲಯಗಳನ್ನು ಟಾರ್ಗೆಟ್​ ಮಾಡಿದ್ದ ಶಾರಿಕ್, ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಬಾಂಬ್​ ನಿಷ್ಕ್ರಿಯ ದಳದಿಂದ ತಪಾಸಣೆ

ಮಂಗಳೂರಿನ ಆಟೋದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿದ್ದಾರೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ ರಾಜ್ಯ ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಸದ್ಯ ಈಗ ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ. ಹೀಗಾಗಿ ಇಂದಿನಿಂದಲೇ ಎನ್​ಐಎ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:37 am, Thu, 1 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು