ಮಂಗಳೂರು: ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ

ಹೊರರಾಜ್ಯದ ಯುವಕನ ಮೇಲೆ ಮನೆಮಂದಿ ಎಲ್ಲರೂ ಸೇರಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ(ಮಾ.28) ಮಧ್ಯಾಹ್ನ ಮಂಗಳೂರು(Mangaluru) ಹೊರವಲಯದ ಅರ್ಕುಳದಲ್ಲಿ ನಡೆದಿದೆ. ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹೊಡೆದಿದ್ದು, ಜೊತೆ ಇರುವ ಮತ್ತೋರ್ವನ ಮೇಲೂ ಹಲ್ಲೆ ಮಾಡಲಾಗಿದೆ.

ಮಂಗಳೂರು: ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ
ಮಂಗಳೂರಿನಲ್ಲಿ ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 29, 2024 | 7:27 PM

ದಕ್ಷಿಣ ಕನ್ನಡ, ಮಾ.29: ಹೊರರಾಜ್ಯದ ಯುವಕನ ಮೇಲೆ ಮನೆಮಂದಿ ಎಲ್ಲರೂ ಸೇರಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ(ಮಾ.28) ಮಧ್ಯಾಹ್ನ ಮಂಗಳೂರು(Mangaluru) ಹೊರವಲಯದ ಅರ್ಕುಳದಲ್ಲಿ ನಡೆದಿದೆ. ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹೊಡೆದಿದ್ದು, ಜೊತೆ ಇರುವ ಮತ್ತೋರ್ವನ ಮೇಲೂ ಹಲ್ಲೆ ಮಾಡಲಾಗಿದೆ. ಹಲ್ಲೆ ದೃಶ್ಯ ಅದೇ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಇನ್ನೂ ಪೊಲೀಸ್ ದೂರು ದಾಖಲಾಗಿಲ್ಲ.

ನಿಯಂತ್ರಣ ತಪ್ಪಿ ಕಾರ್​ ಪಲ್ಟಿ; ಚಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಶಕ್ತಿನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​​ಗೆ ಡಿಕ್ಕಿಯಾಗಿ ಕಾರು  ಪಲ್ಟಿಯಾಗಿದೆ. ಈ ವೇಳೆ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೆಳ್ತಂಗಡಿ ಲಾಯಿಲ ನಿವಾಸಿ ಪ್ರೈಸ್​ ಮ್ಯಾಥ್ಯೂ(32) ಮೃತ ದುರ್ದೈವಿ. ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನಗರ್ತ ​ಪೇಟೆ ಹಲ್ಲೆ ಪ್ರಕರಣದ ಬೆನ್ನಿಗೆ ಆನೇಕಲ್​​ನಲ್ಲೂ ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿರಾಫನಹಳ್ಳಿ ಬಳಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಚಿತ್ರದುರ್ಗ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸಿರಾಫನಹಳ್ಳಿಯ ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿ. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Fri, 29 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us