AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​

ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಪುರುಷರ ಶರ್ಟ್‌ಗಳಲ್ಲಿ ಅಡಗಿಸಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿ ಮಂಗಳೂರಿನ ಆರು ಪೆಡ್ಲರ್‌ಗಳಿಗೆ ಪೂರೈಸುತ್ತಿದ್ದಳು. ಡ್ರಗ್ಸ್​​ ಕೇಸ್​​ ಸಂಬಂಧ ಮಂಗಳೂರು ಪೊಲೀಸರು ಪೆಡ್ಲರ್​​ಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈಕೆಯ ಕುರಿತು ಮಾಹಿತಿ ಸಿಕ್ಕಿತ್ತು. ಅದರ ಆಧಾರದಲ್ಲಿ ಸಿಸಿಬಿ ದಾಳಿ ನಡೆಸಿತ್ತು.

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 13, 2026 | 5:36 PM

Share

ಮಂಗಳೂರು, ಜನವರಿ 13: ಆರು​ ಪೆಡ್ಲರ್​ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್​​ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್​​ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್​​ ಇಂಬ, ಬಂಟ್ವಾಳದ ನಿಸಾರ್ ಅಹಮ್ಮದ್, ಕಾಪು ನಿವಾಸಿ ಮೊಹಮ್ಮದ್ ಇಕ್ಬಾಲ್ ಮತ್ತು ಪಡುಬಿದ್ರೆ ನಿವಾಸಿ ಶೆಹರಾಜ್ ಶಾರೂಕ್ ಎಂಬ ಡ್ರಗ್ ಪೆಡ್ಲರ್​​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಜಲಿಯಾಳಿಂದ ಡ್ರಗ್ಸ್ ಪಡೆದು ಮಂಗಳೂರಲ್ಲಿ ಮಾರುತ್ತಿದ್ದ ವಿಚಾರ ತನಿಖೆ ವೇಳೆ ಗೊತ್ತಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಲ್ಲಿ ಸಿಸಿಬಿ ರೇಡ್​ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?; 55.88 ಕೋಟಿ ರೂ. ಮೌಲ್ಯದ MDMA ಸೀಜ್​​

ಉಗಾಂಡದ ಜಲಿಯಾ ಯಾರಿಗೂ ಅನುಮಾನ ಬಾರದಂತೆ ಎಂಡಿಎಂ ಸಾಗಾಟಕ್ಕೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದಳು. ಮಾಲ್‌ಗಳು ಅಥವಾ ಟೆಕ್ಸ್‌ ಟೈಲ್​​ಗಳಿಂದ ಪುರುಷರ ಹೊಸ ಶರ್ಟ್​ಗಳನ್ನು ಖರೀದಿಸಿ ಅದನ್ನು ಮೆಲ್ಲಗೆ ಬಿಡಿಸಿ ಅದರೊಳಗೆ ಅಂದಾಜು 300 ಗ್ರಾಂ ಎಂಡಿಎಂಎ ಪ್ಯಾಕ್ ಇಟ್ಟು ಸೂಟ್ ಕೇಸ್​​ನಲ್ಲಿ ತುಂಬುತ್ತಿದ್ದಳು. ಮೇಲ್ನೋಟಕ್ಕೆ ಇದು ಅಂದವಾಗಿ ಶರ್ಟ್ ಜೋಡಿಸಿಟ್ಟ ಸೂಟ್ ಕೇಸ್​​ನಂತೆ ಕಾಣುತ್ತಿತ್ತು. ಶರ್ಟ್ ಬಿಡಿಸಿ ನೋಡಿದರೆ ಆದರೊಳಗೆ ಎಂಡಿಎಂ ಪ್ಯಾಕೇಟ್​​ಗಳು ಇರುತ್ತಿದ್ದವು. ಇನ್ನು ಜಲಿಯಾ ಉಗಾಂಡದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ವಾಸವಿದ್ದಳು ಎಂಬ ವಿಚಾರವೂ ಬಯಲಾಗಿದೆ. ಆ ಮೂಲಕ ಮಂಗಳೂರಿಗೆ ಸರಬರಾಜಾಗುತ್ತಿದ್ದ ಡ್ರಗ್ಸ್​​ ಜಾಲದ ಒಂದು ಪ್ರಮುಖ ಕೊಂಡಿ ಕಳಚಿದೆ. ಅದರೆ ಇಂತಹ ನುರಾರು ಮಂದಿ ಇರುವ ಅನುಮಾನವಿದ್ದು, ಅವರ ಪತ್ತೆಯನ್ನೂ ಶೀಘ್ರಮಾಡಿ ತಕ್ಕ ಶಾಸ್ತಿ ನೀಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:34 pm, Tue, 13 January 26

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ