ಮಂಗಳೂರು: ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲೇ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಶೋಧ ಕಾರ್ಯ ತೀವ್ರ

2019 ರಲ್ಲಿ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ, ಸೇತುವೆಯು ಸರಣಿ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿತ್ತು. 2020 ರಲ್ಲಿ, ಜನರು ಸೇತುವೆಯ ಮೇಲ್ಭಾಗದಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವುದನ್ನು ತಡೆಯಲು ಮುಡಾ ಅನುದಾನದಿಂದ ಬೇಲಿಯನ್ನು ಹಾಕಲಾಗಿತ್ತು. ಬೇಲಿ ಹಾಕಿದ ನಂತರ ಆತ್ಮಹತ್ಯೆಗಳು ನಿಂತಿದ್ದವು.

ಮಂಗಳೂರು: ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲೇ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಶೋಧ ಕಾರ್ಯ ತೀವ್ರ
ವ್ಯಕ್ತಿ ನದಿಗೆ ಹಾರಿದ ಜಾಗದಲ್ಲಿ ಸೇತುವೆಯಲ್ಲಿ ಜನ ಜಮಾಯಿಸಿರುವುದು
Follow us
TV9 Web
| Updated By: Ganapathi Sharma

Updated on:Oct 30, 2023 | 8:27 PM

ಮಂಗಳೂರು, ಅಕ್ಟೋಬರ್ 30: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಂಗಳೂರು ಹೊರವಲಯದ ತೊಕ್ಕೊಟ್ಟು (Thokottu) ಬಳಿಯ ನೇತ್ರಾವತಿ ಸೇತುವೆ (Netravati River Bridge) ಮತ್ತೆ ಸುದ್ದಿಗೆ ಗ್ರಾಸವಾಗಿದೆ. ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿಯೊಬ್ಬರು ಸೋಮವಾರ ನದಿಗೆ ಹಾರಿದ್ದಾರೆ. ನದಿಗೆ ಹಾರಿದವರನ್ನು ಚಿಕ್ಕಮಗಳೂರು ಮೂಲದ ಪ್ರಶಾಂತ್ (35) ಎಂದು ಹೇಳಲಾಗಿದೆ.

ಕುಟುಂಬಸ್ಥರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದ ಪ್ರಶಾಂತ್, ಕುಟುಂಬ ಸದಸ್ಯರನ್ನು ಆಸ್ಪತ್ರೆಯಲ್ಲಿ ಬಿಟ್ಟು ಕಾರಿನಲ್ಲಿ ಸೇತುವೆ ಬಳಿ ಬಂದಿದ್ದರು. ಬಳಿಕ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ.

ಪ್ರಸನ್ನ ಅವರು ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ರಕ್ಷಣೆಗಾಗಿ ಪ್ರಯತ್ನ ಪಟ್ಟರೂ ಫಲಕಾರಿಯಾಗಲಿಲ್ಲ ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪ್ರಶಾಂತ್ ತರಕಾರಿ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ನೇತ್ರಾವತಿ ನದಿಯಲ್ಲಿ ಪ್ರಶಾಂತ್​ಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಂಕನಾಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಆಧಾರ್​​ ಫಿಂಗರ್​​ ಪ್ರಿಂಟ್​ಗೇ ಕನ್ನ, ಖಾತೆಯಿಂದ ಹಣ ವಿತ್​ಡ್ರಾ: ಮಂಗಳೂರಿನಲ್ಲಿ ಸೈಬರ್ ಚೋರರು ಹಣ ಎಗರಿಸುತ್ತಿದ್ದುದು ಹೀಗೆ

2019 ರಲ್ಲಿ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ, ಸೇತುವೆಯು ಸರಣಿ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿತ್ತು. 2020 ರಲ್ಲಿ, ಜನರು ಸೇತುವೆಯ ಮೇಲ್ಭಾಗದಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವುದನ್ನು ತಡೆಯಲು ಮುಡಾ ಅನುದಾನದಿಂದ ಬೇಲಿಯನ್ನು ಹಾಕಲಾಗಿತ್ತು. ಬೇಲಿ ಹಾಕಿದ ನಂತರ ಆತ್ಮಹತ್ಯೆಗಳು ನಿಂತಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Mon, 30 October 23

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ