AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಗಳೂರಿನ ಚರ್ಚ್ ಪಾದ್ರಿ ಮತ್ತೆ ಅರೆಸ್ಟ್

ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಎರಡನೇ ಬಾರಿಗೆ ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪೆರ್ಮನ್ನೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಗಳೂರಿನ ಚರ್ಚ್ ಪಾದ್ರಿ ಮತ್ತೆ ಅರೆಸ್ಟ್
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 19, 2026 | 10:54 AM

Share

ಮಂಗಳೂರು, ನವೆಂಬರ್ 19: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಾದ್ರಿ, ಇದೀಗ ಎರಡನೇ ಬಾರಿ ಮತ್ತೆ ಜೈಲು ಸೇರಿದ್ದಾರೆ. ಡಿಸೆಂಬರ್ 2ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?

ಕಳೆದ ಮೇ ತಿಂಗಳಲ್ಲಿ ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಸಿಪ್ರಿಯನ್ ಪಿಂಟೋ ಪಾದ್ರಿಯಾಗಿದ್ದರು. ಈ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮೇ 13, 2026ರಂದು ದೂರು ದಾಖಲಾಗಿತ್ತು.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಕೇಂದ್ರ ವಿಭಾಗದ ಎಸಿಪಿಗೆ ವಹಿಸಿದ್ದರು. ಇದೀಗ ಇದೇ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ

ಕಳೆದ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ವೆಲೆನ್ಸಿಯಾ ಚರ್ಚ್‌ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಾದ್ರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

LIVE TV

ಇದೀಗ ಮತ್ತೆ ಸಿಪ್ರಿಯನ್ ಪಿಂಟೋ ಬಂಧನವಾಗಿದ್ದು, ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ವಿಚಾರದಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಹೋರಾಟ ನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More