Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿಗರಿಗೆ ಸಿಹಿಸುದ್ದಿ​, ಆಸ್ತಿ ತೆರಿಗೆ ಪರಿಷ್ಕರಿಸಿದ ಪಾಲಿಕೆ, ತಗ್ಗಿದ ಹೊರೆ

ತೆರಿಗೆದಾರರಿಗೆ ಹೊರೆಯಾಗದಂತೆ ಪರಿಷ್ಕೃತ ದರದಲ್ಲಿ ತೆರಿಗೆ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್​ ತಿಳಿಸಿದ್ದಾರೆ.

ಮಂಗಳೂರಿಗರಿಗೆ ಸಿಹಿಸುದ್ದಿ​, ಆಸ್ತಿ ತೆರಿಗೆ ಪರಿಷ್ಕರಿಸಿದ ಪಾಲಿಕೆ, ತಗ್ಗಿದ ಹೊರೆ
ಮಂಗಳೂರು ಮಹಾನಗರ ಪಾಲಿಕೆ
Follow us
ರಮೇಶ್ ಬಿ. ಜವಳಗೇರಾ
|

Updated on:Mar 30, 2023 | 7:43 AM

ಮಂಗಳೂರು: ಈ ಹಿಂದೆ ಪರಿಸ್ಕರಿಸಲಾಗಿದ್ದ 2023-24ರ ಆಸ್ತಿ ತೆರಿಗೆಯ(property tax) ಬಗ್ಗೆ ಸಾರ್ವಜನಿಕರಿಂದ ದೂರುಗಳು ಮತ್ತು ಮಹಾನಗರ ಪಾಲಿಕೆಯ ಸದಸ್ಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಮತ್ತೊಮ್ಮೆ ಪರಿಸ್ಕರಿಸಲಾಗಿದೆ. ತೆರಿಗೆದಾರರಿಗೆ ಹೊರೆಯಾಗದಂತೆ ಪರಿಷ್ಕೃತ ದರದಲ್ಲಿ ತೆರಿಗೆ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್(mangaluru city corporation) ಜಯಾನಂದ ಅಂಚನ್​ ತಿಳಿಸಿದ್ದಾರೆ.

ಮಾ 20ರಂದು ಆಸ್ತಿ ತೆರಿಗೆ ಪರಿಷ್ಕರಣೆ ಕುರಿತ ಕಾರ್ಯಸೂಚಿಗೆ ಅನುಮೋದನೆ ನೀಡಿದ್ದು, ಈಗಾಗಲೇ ಮಾರ್ಚ್ 21ರಂದಯ ಎಂಸಿಸಿಯ ಆಸ್ತಿಯ ತೆರಿಗೆ ಸಾಫ್ಟ್​ವೇರ್​ನಲ್ಲಿ ಪರಿಸ್ಕೃತ ಆಸ್ತಿ ತೆರಿಗೆಯನ್ನು ಅಳವಡಿಲಾಗಿದೆ. ಆಸ್ತಿ ಮಾಲೀಕರು 2023-24ನೇ ಸಾಲಿನ ಆಸ್ತಿ ತೆರಿಗೆ ಈಗಾಗಲೇ ಪಾವತಿಸಿದ್ದರೆ ಅವರು ಮುಂದಿನ ವರ್ಷ ತೆರಿಗೆ ಪಾವತಿಸುವಾಗ ಸರಿಹೊಂದಿಸಲಾಗುತ್ತದೆ. ಈ ಸಂಬಂಧ ಆಸ್ತಿ ಮಾಲೀಕರಿಗೆ ಎಸ್​ಎಂಎಸ್​ ಕಳುಹಿಸಲಾಗುತ್ತದೆ. ಈಗಾಗಲೇ 32,407 ಆಸ್ತಿಗಳ ಮಾಲೀಕರು 2023-24ನೇ ಸಾಲಿಗೆ 17.25 ಕೋಟಿ ರೂ. ತೆರಿಗೆ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಆಸ್ತಿ ಮಾಲೀಕರು ಏಪ್ರಿಲ್​​ ಒಳಗೆ ಪಾವತಿ ಮಾಡಿದರೆ ತೆರಿಗೆಯಲ್ಲಿ ಶೇ.5ರಷ್ಟು ರಿಯಾಯಿತಿಯನ್ನು ಪಡೆಯಬಹುದು ಎಂದು ಜಯಾನಂದ್ ಹೇಳಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ 2022-23ನೇ ಸಾಲಿನ ಆಸ್ತಿ ತೆರಿಗೆ ಪರಿಸ್ಕರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಿಂದಿನ ಆಯುಕ್ತರಿಗೆ ಸರ್ಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಹಾನಗರ ಪಾಲಿಕೆ ಅಧಿನಿಯಮ 1976ಕ್ಕೆ ತಂದಿರುವ ಕಾನೂನು ತಿದ್ದುಪಡಿಯಂತೆ ಪರಿಸ್ಕೃತ ಆಸ್ತಿ ತೆರಿಗೆಯನ್ನು ಜಾರಿಗೊಳಿಸಲಾಗಿತ್ತು. ಆದ್ರೆ, ಜಾರಿಗೊಳಿಸಿದ ಆಸ್ತಿ ತೆರಿಗೆಯಲ್ಲಿ ಏಕರೂಪತೆ ಇಲ್ಲದೇ ಜನರಿಗೆ ಹೊರೆಯಾಗುವ ರೀತಿಯಲ್ಲಿ ನಿಗದಿಪಡಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿದ್ದವು. ಹೀಗಾಗಿ ಮರುಪರಿಶೀಲಿಸಿ ಸಾರ್ವಜನಿಕರಿಗೆ ಹೊರೆಯಾದಂತೆ ತೆರಿಗೆ ದರ ನಿರ್ಧರಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿತ್ತು ಎಂದಿದ್ದಾರೆ.

ಇನ್ನು ಎಂಸಿಸಿ ಕೌನ್ಸಿಲ್‌ನ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಮಾತನಾಡಿ, ಆಯಾ ಭಾಗದ ಆಸ್ತಿ ಮೌಲ್ಯವನ್ನು ಪರಿಗಣಿಸಿ ತೆರಿಗೆ ಪರಿಷ್ಕರಣೆ ಮಾಡಲಾಗಿದೆ. ಕಟ್ಟದ ತೆರಿಗೆ ಪಾವತಿಸಬಹುದಾದ ಭಾಗದ ಶೇ0.2ರಿಂದ ಶೇ1.5ರಷ್ಟು ಪರಿಗಣಿಸಿ ಲೆಕ್ಕಹಾಕಲಾಗುತ್ತದೆ. 2022-23ರ ಆರ್ಥಿಕ ವರ್ಷದಲ್ಲಿ 93 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ ಎಂದು ವಿವರಿಸಿದ್ದಾರೆ.

ಇನ್ನಷ್ಟು ದಕ್ಷಿಣ ಕನ್ನಡ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:41 am, Thu, 30 March 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್