ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ
ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ ಬರದಿದ್ದಕ್ಕೆ ಬೇಸಗೊಂಡು ಆತ್ಮ,ಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ 17 ವರ್ಷದ ಕಾಲೇಜು ವಿದ್ಯಾರ್ಥಿನಿ ನಿಶಾ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾಳೆ.
ಮಂಗಳೂರು, (ನವೆಂಬರ್ 26): ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (College Student) ಕೀಟನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ಖಿನ್ನತೆಗೊಳಗಾಗಿದ್ದ ನಿಶಾ, ಕೀಟನಾಶಕ ಸೇವಿಸಿದ್ದಳು. ಬಳಿಕ ಮನೆಯವರೂ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಶಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ,
ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದ್ರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಳು. ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ದಿದ್ದು, ಕಳೆದ ಒಂದು ವಾರದಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಳು, ಆದ್ರೆ, ಇಂದು ಚಿಕಿತ್ಸೆ ಫಲಕಾರಿಗಾದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ