Vasanth Bangera: ದಕ್ಷಿಣ ಕನ್ನಡ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನ

Belthangady Ex MLA K Vasanth bangera Passes Away : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ ನಿಧನರಾಗಿದ್ದಾರೆ.

Vasanth Bangera: ದಕ್ಷಿಣ ಕನ್ನಡ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನ
ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ

Updated on: May 08, 2024 | 6:22 PM

ಬೆಂಗಳೂರು/ಮಂಗಳೂರು, (ಮೇ 08): ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ (Belthangady Ex MLA K Vasanth bangera )ನಿಧನರಾಗಿದ್ದಾರೆ. ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಇಂದು ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ.ವಸಂತ ಬಂಗೇರ, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ನಾಳೆ (ಮೇ 09) ಬೆಳಗ್ಗೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ ಎಂದು ತಿಳಿದುಬಂದಿದೆ.

1946ರ ಜ.15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ.ವಸಂತ ಬಂಗೇರ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ನಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1983, 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಕೆ.ವಸಂತ ಬಂಗೇರ ಗೆಲುವು ಸಾಧಿಸಿದ್ದರು. 2008ರ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. 2013ರಲ್ಲೂ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 8 May 24

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us