Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನದಿಯಲ್ಲಿ ಮರಳಿದ್ರೂ ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು, ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ತೀರ್ಮಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸರ್ಕಾರಿ ಹಾಗೂ ಖಾಸಗಿಯಾಗಿ ನಡೆಯುತ್ತಿರುವ ಕಾಮಗಾರಿಗಳಿಗೆ ಮರಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೇ ಮುಂದುವರೆದ್ರೆ ಇನ್ನು ಹತ್ತು ದಿನಗಳಲ್ಲಿ ಸಂಪೂರ್ಣ ಕಾಮಗಾರಿಗಳು ಸ್ಥಗಿತಗೊಳ್ಳಲಿದ್ದು, ಗುತ್ತಿಗೆದಾರರು ಸಂಕಷ್ಟ ಎದುರಿಸಬೇಕಾದ ಆತಂಕ ಎದುರಾಗಿದೆ.

ಮಂಗಳೂರು: ನದಿಯಲ್ಲಿ ಮರಳಿದ್ರೂ ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು, ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ತೀರ್ಮಾನ
ಮರಳಿನ ರಾಶಿ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma

Updated on: Oct 27, 2023 | 3:34 PM

ಮಂಗಳೂರು, ಅಕ್ಟೋಬರ್ 27: ಮಳೆಗಾಲದಲ್ಲಿ ಉಕ್ಕಿ ಹರಿಯುವ ಪಂಚ ನದಿಗಳಿರುವ ಕಾರಣ ಅಲ್ಲಿ ಯತೇಚ್ಛವಾಗಿ ಮರಳು (Sand) ಸಂಗ್ರಹವಾಗುತ್ತದೆ. ಆದ್ರೆ ಕಟ್ಟಡ ಕಾಮಗಾರಿ (Construction Work) ಆಗಬೇಕು ಅಂದ್ರೆ ಕಾಳ ಸಂತೆಯಲ್ಲೇ ಮರಳು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಮರಳು ಸಿಗದೆ ಇರೊ ಕಾರಣದಿಂದ ಗುತ್ತಿಗೆದಾರರು ತಮ್ಮ ಕೆಲಸ ಸ್ಥಗಿತಗೊಳಿಸೋದಾಗಿ ಎಚ್ಚರಿಕೆ ನೀಡಿದ್ದಾರೆ. ನೇತ್ರಾವತಿ, ಕುಮಾರದಾರ, ಪಲ್ಗುಣಿ, ನಂದಿನಿ, ಪಯಸ್ವಿನಿ, ಇದಿಷ್ಟೂ ನದಿಗಳು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಹರಿಯುವ ಪ್ರಮುಖ ನದಿಗಳು. ಈ ಎಲ್ಲಾ ನದಿಗಳಲ್ಲೂ ಯತೇಚ್ಛವಾಗಿ ಮರಳು ಸಂಗ್ರಹ ಇದೆಯಾದ್ರೂ, ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಗಾರಿಗೆ ಮರಳು ಸಿಗ್ತಾ ಇಲ್ಲ. ಹಾಗಂತ ನದಿಯಿಂದ ಮರಳು ತೆಗೆಯುವ ಗುತ್ತಿಗೆಯನ್ನು ಪಡೆದುಕೊಂಡಿರೋ ಸಾವಿರಾರು ಜನರಿದ್ದಾರಾದ್ರೂ ಸದ್ಯಕ್ಕೆ ಸರ್ಕಾರ ಈ ಗುತ್ತಿಗೆಯನ್ನು ತಡೆ ಹಿಡಿದಿದೆ. ಇನ್ನು ಸಿಆರ್‌ಝಡ್ ವ್ಯಾಪ್ತಿಯಲ್ಲಿಯೂ ಮರಳುಗಾರಿಕೆಗೆ ನಿಷೇಧವಿದ್ದು, ಸದ್ಯ ಸರ್ಕಾರದ ಮುಂದೆ ಇತ್ಯರ್ಥಕ್ಕೆ ಬಾಕಿ ಇದೆ.

ಈ ಎಲ್ಲ ಕಾರಣಗಳಿಂದಾಗಿ ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸರ್ಕಾರಿ ಹಾಗೂ ಖಾಸಗಿಯಾಗಿ ನಡೆಯುತ್ತಿರುವ ಕಾಮಗಾರಿಗಳಿಗೆ ಮರಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೇ ಮುಂದುವರೆದ್ರೆ ಇನ್ನು ಹತ್ತು ದಿನಗಳಲ್ಲಿ ಸಂಪೂರ್ಣ ಕಾಮಗಾರಿಗಳು ಸ್ಥಗಿತಗೊಳ್ಳಲಿದ್ದು, ಗುತ್ತಿಗೆದಾರರು ಸಂಕಷ್ಟ ಎದುರಿಸಬೇಕಾದ ಆತಂಕ ಎದುರಾಗಿದೆ. ಕಾಮಗಾರಿ ಸ್ಥಗಿತಗೊಂಡ್ರೆ ಕಾರ್ಮಿಕರು, ಹಾಗೂ ಕಟ್ಟಡ ಕಾಮಗಾರಿಗೆ ಪೂರಕವಾಗಿ ಕೆಲಸ ಮಾಡುವ ಸಾವಿರಾರು ಜನರು ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಲ್ಲಿ ಹಾಗೂ ಸಮುದ್ರದ ಹಿನ್ನೀರಿನಲ್ಲಿ ಯತೇಚ್ಛ ಮರಳು ಸಂಗ್ರಹವಾಗುವ ಕಾರಣ ಮರಳು ದಿಬ್ಬಗಳನ್ನು ತೆರವು ಮಾಡಲು ಮರಳುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಆದ್ರೆ ಎಂದಿನಂತೆ ಅಕ್ಟೋಬರ್ ಮೊದಲ ವಾರದಲ್ಲೇ ಮರಳುಗಾರಿಕೆ ಆರಂಭವಾಗಬೇಕಿತ್ತಾದ್ರೂ, ಈ ಬಾರಿ ಮಳೆಗಾಲ ಮುಗಿದ ಬಳಿಕವೂ ಸರ್ಕಾರ ಮರಳುಗಾರಿಕೆಗೆ ಅವಕಾಶ ಕಲ್ಪಿಸಿಲ್ಲ. ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಿರೋ ಗಣಿ ಇಲಾಖೆ ಮರಳು ತೆಗೆಯಲು ಅನುಮತಿಗಾಗಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆಯಾದ್ರೂ ಸರ್ಕಾರ ಇನ್ನೂ ಉತ್ತರ ನೀಡಿಲ್ಲ. ಇನ್ನು ನದಿಗಳಲ್ಲಿ ಮರಳು ತೆಗೆಯುವ ಗುತ್ತಿಗೆ ಪಡೆದವರಿಗೆ ವೇ ಬ್ರಿಜ್ ನಿರ್ಮಾಣ ಮಾಡಬೇಕು ಅನ್ನೋ ಕಾನೂನು ತಂದ ಕಾರಣ ನದಿಯಲ್ಲೂ ಮರಳುಗಾರಿಕೆ ನಡೆಯುತ್ತಿಲ್ಲ. ಹಾಗಂತ ಕಾಳ ಸಂತೆಯಲ್ಲಿ ಮರಳು ಸಿಗ್ತಾ ಇರೋದು ಮಾತ್ರವಲ್ಲದೆ ಬೆಂಗಳೂರು, ಕೇರಳ ಕಡೆಗೆ ರವಾನೆಯಾಗುತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಿ ಸಮಸ್ಯೆ ಬಗೆ ಹರಿಸಬೇಕು ಅಂತ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಪೊಲೀಸ್ ಕಮೀಷನರನ್ನೂ ಬಿಡದ ಸೈಬರ್ ವಂಚಕರು ಏನು ಮಾಡಿದ್ದಾರೆ ನೋಡಿ

ಈಗ ಜಾರಿಯಲ್ಲಿರೋ ಮರಳು ನೀತಿಯನ್ನು ಅನುಸರಿಸೋದು ಕಷ್ಟವಾಗಿರೋ ಕಾರಣ ಮರಳು ಗುತ್ತಿಗೆದಾರರೂ ಮರಳುಗಾರಿಕೆ ನಿಲ್ಲಿಸಿದ್ದಾರೆ. ಇದು ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸಹಿತ ಹಲವು ಕಾಮಗಾರಿಗಳ ಮೇಲೆ ಪರಿಣಾಮ ಬೀರಿದ್ದು, ಕಾರ್ಮಿಕರಲ್ಲೂ ಆತಂಕ ಮೂಡಿಸಿದೆ. ಈ ಸಮಸ್ಯೆ ಬಗೆ ಹರಿಸದೇ ಇದ್ದಲ್ಲಿ ಕಟ್ಟಡ ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸೋ ಅನಿವಾರ್ಯತೆಗೆ ಸಿಲುಕಿದ್ದಾರೆ. ತಕ್ಷಣ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡುವ ಮೂಲಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ತೀರ್ಮಾನಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!