AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಸಂತ್ರಸ್ತಗೆ ಹೊಸ ಆಟೋ, 5 ಲಕ್ಷ ರೂ. ಪರಿಹಾರ ಚೆಕ್​ ವಿತರಿಸಿದ ಕಟೀಲ್

ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ. ಪರಿಹಾರ ಧನದ ಚೆಕ್​ನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿತರಣೆ ಮಾಡಿದರು.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಸಂತ್ರಸ್ತಗೆ ಹೊಸ ಆಟೋ, 5 ಲಕ್ಷ ರೂ. ಪರಿಹಾರ ಚೆಕ್​ ವಿತರಿಸಿದ ಕಟೀಲ್
ಆಟೋ ಚಾಲಕ ಪುರುಷೋತ್ತಮ ಪೂಜಾರಿಗೆ ಪರಿಹಾರ
ಗಂಗಾಧರ​ ಬ. ಸಾಬೋಜಿ
|

Updated on:Mar 05, 2023 | 6:47 PM

Share

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ (Mangaluru Blast) ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ. ಪರಿಹಾರ ಧನದ ಚೆಕ್​ನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿತರಣೆ ಮಾಡಿದರು. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​ನಲ್ಲಿ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಕೂಡ ಗಾಯಗೊಂಡಿದ್ದರು. ನಗರದ ಉಜ್ಜೋಡಿಯ ಪುರುಷೋತ್ತಮ ನಿವಾಸಕ್ಕೆ ತೆರಳಿ ಆಟೋದ ದಾಖಲೆ ಪತ್ರಗಳ ಜೊತೆ ನೂತನ ಆಟೋ ಹಸ್ತಾಂತರ ಮಾಡಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಹಾಗೂ ಸ್ಥಳೀಯ ನಾಯಕರು‌ ಸಾಥ್​ ನೀಡಿದರು.

ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂಬ ಪ್ರಯತ್ನ

ಐಸಿಸ್ ಮಂಗಳೂರು​ ಕುಕ್ಕರ್​ ಬಾಂಬ್​ ಸ್ಫೋಟದ ಹೊಣೆ ಹೊತ್ತ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಹತ್ತಾರು ವರ್ಷಗಳಿಂದ ಉಗ್ರ ಚಟುವಟಿಕೆಗಳು ನಡೆಯುತ್ತಿವೆ. ಬಹಳ ವರ್ಷಗಳಿಂದ ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂಬ ಪ್ರಯತ್ನವಿತ್ತು. ಮೋದಿ ಪ್ರಧಾನಿಯಾದ ಬಳಿಕ ಈ ಷಡ್ಯಂತ್ರ ನಿಲ್ಲಿಸುವ ಕೆಲಸ ಆಗಿದೆ. ಇಸ್ಲಾಮಿಕ್ ರಾಷ್ಟ್ರ ಮಾಡುತ್ತೇವೆ ಅಂತಾ ಆ ಉಗ್ರ ಸಂಘಟನೆ ಹೇಳಿದೆ. ಇದನ್ನು ಗಮನಿಸಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೆ ಎಂದರು.

ಇದನ್ನೂ ಓದಿ: Mangaluru: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಸ್ಫೋಟದ ಹೊಣೆ ಹೊತ್ತ ISIS ಉಗ್ರ ಸಂಘಟನೆ

ಭಯೋತ್ಪಾದಕರು ಕಾಂಗ್ರೆಸ್​​​ನಲ್ಲಿ‌ ಇದ್ದಾರೆ ಅನ್ನೋದು ಸ್ಪಷ್ಟ

ಕಾಂಗ್ರೆಸ್ ಉಗ್ರ ಚಟುವಟಿಕೆಗಳಿಗೆ ಬೆಂಬಲ ಕೊಡುವ ಪಾರ್ಟಿಯಾ? ಸ್ಫೋಟದಲ್ಲಿ ಗಾಯಗೊಂಡ ಪುರುಷೋತ್ತಮ ಪೂಜಾರಿ ಅಮಾಯಕ. ಆದರೆ ಕಾಂಗ್ರೆಸ್ಸಿಗರು NIA ಬಂಧಿಸಿದ ಉಗ್ರನನ್ನೇ ಅಮಾಯಕ ಅಂತಾರೆ. ಉಡುಪಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಗನನ್ನೇ NIA ಬಂಧಿಸಿದೆ. ಆತನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ್ದನ್ನು ನೋಡಿದ್ದೀರಾ? ಭಯೋತ್ಪಾದಕರು ಕಾಂಗ್ರೆಸ್​​​ನಲ್ಲಿ‌ ಇದ್ದಾರೆ ಅನ್ನೋದು ಸ್ಪಷ್ಟ. ಕಾಂಗ್ರೆಸ್ ನೀತಿಯಿಂದ ಭಯೋತ್ಪಾದನಾ ಚಟುವಟಿಕೆ ಹಳ್ಳಿಗೂ ವ್ಯಾಪಿಸಿದೆ ಎಂದು ಹೇಳಿದರು.

ಸ್ಫೋಟದ ಹೊಣೆ ಹೊತ್ತ ಐಎಸ್​ಐಎಸ್

ಇನ್ನು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್ (ISIS)​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆyಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಶಾರಿಕ್ ಗುಣಮುಖ, ಬೆಂಗಳೂರಿಗೆ ಶಿಫ್ಟ್, ಲಾಡ್ಜ್ ಗೆ ಬರುತ್ತಿತ್ತು ಸ್ಪೋಟಕ ವಸ್ತುಗಳು

ಇತ್ತೀಚೆಗೆ ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sun, 5 March 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ