AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆ ಸೇರಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ‌ಗೆ, ಇಂದು(ಮಾ.22) ಗುರು ಬೆಳದಿಂಗಳು ಫೌಂಡೇಶನ್​ಯಿಂದ 6 ಲಕ್ಷ ವೆಚ್ಚದಲ್ಲಿ ದುರಸ್ತಿಗೊಳಿಸಿದ ನವೀಕೃತ ಮನೆಯನ್ನ ಹಸ್ತಾಂತರಗೊಳಿಸಿದ್ದಾರೆ.

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್
ನವೀಕರಿಸಿದ ಆಟೋ ಚಾಲಕನ ಮನೆ
ಕಿರಣ್ ಹನುಮಂತ್​ ಮಾದಾರ್
|

Updated on:Mar 22, 2023 | 3:02 PM

Share

ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆ ಸೇರಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ‌ಗೆ, ಇಂದು(ಮಾ.22) ಗುರು ಬೆಳದಿಂಗಳು ​ಫೌಂಡೇಶನ್​ನಿಂದ 6 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಲಾಯಿತು. ಹೌದು 2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು.  ಆದರೆ ಈ  ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಈ ವಿಷಯ ತಿಳಿದ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು. ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್​ ನೀಡಿದ್ದಾರೆ. ಇನ್ನು ಮಗಳ ಇ.ಎಸ್.ಐ ಯೋಜನೆಯಿಂದಲೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನ ಕುಟುಂಬ ಭರಿಸಿತ್ತು. ಆದರೆ ಈವರೆಗೂ ಪುರುಷೋತ್ತಮ್​ಗೆ ಸರ್ಕಾರದ ಪರಿಹಾರ ಲಭಿಸಿಲ್ಲ. ಸದ್ಯ ಸರ್ಕಾರದ ಪರಿಹಾರಕ್ಕಾಗಿ ಪುರುಷೋತ್ತಮ್ ಕುಟುಂಬ ಕಾಯುತ್ತಿದೆ.

ಘಟನೆಯ ಸಮಗ್ರ ನೋಟ

ನವೆಂಬರ್ 19. 2022 ರಂದು ಮಂಗಳೂರಿನಲ್ಲಿ ಸ್ಪೋಟಗೊಂಡ ಬಾಂಬ್ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಪೋಟದಿಂದ ಬಯಲಾಗಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಪೋಟಗೊಂಡು ಆತ ಅಲ್ಲೇ ತಗ್ಲಾಕ್ಕೊಂಡಿದ್ದ. ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಯಾವಾಗ ಅರೆಸ್ಟ್ ಆಗುತ್ತಾನೊ ಆಗ ಶಾರಿಕ್ ಅಲ್ಲಿಂದ ಕಾಲ್ಕಿತ್ತಿದ್ದ. ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿಕೊಂಡಿದ್ದ. ಹಿಂದೂ ವೇಶ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ.

ಇದನ್ನೂ ಓದಿ:Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಇನ್ನು ಮೈಸೂರಿನ ತನ್ನ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರು ಮಾಡಿದ್ದ. ಅಲ್ಲಿಂದ ಮಂಗಳೂರಿಗೆ ತಂದು ಸಿಡಿಸುವ ಪ್ಲಾನ್ ಇತ್ತು. ನವೆಂಬರ್ 19 ರ ಬೆಳಗ್ಗೆ ಮೈಸೂರಿನಿಂದ ತಾನು ತಯಾರಿಸಿದ್ದ ಕುಕ್ಕರ್ ಬಾಂಬ್ ಸಮೇತ ಮಂಗಳೂರಿನ ಕಡೆ ಹೊರಟಿದ್ದ. ಮೈಸೂರಿನ ತನ್ನ ಬಾಡಿಗೆ ಮನೆಯಿಂದ ಆಟೋದಲ್ಲಿ ಬಾಂಬ್​ನ್ನು ಇಟ್ಟುಕೊಂಡು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್​ಗೆ ಬಂದಿಳಿದಿದ್ದ. ಮೈಸೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ 20 ನಿಮಿಷ ಬಸ್​ಗೆ ಕಾದಿದ್ದ.

ಅಲ್ಲಿಂದ ನೇರವಾಗಿ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್​ಗೆ ಹತ್ತಿದ್ದ. ಅಲ್ಲಿಂದ ಕುಶಾಲನಗರ, ಮಡಿಕೇರಿ, ಸುಳ್ಯ, ಪುತ್ತೂರು ಮಾರ್ಗವಾಗಿ ಬಂದು ಮಂಗಳೂರಿನ ಪಡೀಲಿನಲ್ಲಿ ಇಳಿದಿದ್ದ. ಇದಕ್ಕೂ ಮುನ್ನ ತಾನು ತಂದಿದ್ದ ಬಾಂಬ್ ಜೊತೆ ಊಟಕ್ಕಾಗಿ ಬಸ್ ಬ್ರೇಕ್ ಕೊಟ್ಟಾಗ ಹೋಟೆಲ್ ಒಳಗೂ ಬಾಂಬ್ ತೆಗೆದುಕೊಂಡು ಹೋಗಿದ್ದ. ಇನ್ನು ಮಂಗಳೂರಿನ ಪಡೀಲು ಬಳಿ ಇಳಿದವನೆೇ ಪಂಪ್ ವೆಲ್ ಕಡೆ ಅರ್ಧ ಕಿಲೋ ಮೀಟರ್ ನಡೆದುಕೊಂಡು ಬಂದಿದ್ದ.

ಇದನ್ನೂ ಓದಿ:ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ಬಳಿಕ ಕುಕ್ಕರ್ ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿಕೊಂಡು ಆಟೋ ಹತ್ತಿದ್ದ. ಪಂಪ್ ವೆಲ್ ಡ್ರಾಪ್ ಅಂತಾ ಹೇಳಿ ಆಟೋ ಹತ್ತಿದ್ದು, ಆಟೋ ಪಂಪ್ ವೆಲ್ ತಲುಪೊ ಮಧ್ಯದಲ್ಲೇ ಬಾಂಬ್​ನಲ್ಲಿದ್ದ ಝೆಲ್​ಗೆ ಬೆಂಕಿ ಹೊತ್ತಿಕೊಂಡು ಬ್ಲಾಸ್ಟ್ ಆಗಿತ್ತು. ಆದ್ರೆ ಡಿಟೊನೇಟರ್ ಮೂಲಕ ಬ್ಲಾಸ್ಟ್ ಆಗದೆ ಇದ್ದಿದ್ರಿಂದ ಆಗೋ ಭಾರೀ ಅನಾಹುತ ತಪ್ಪಿತ್ತು.

ಇನ್ನು ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಟಾರ್ಗೆಟ್ ಇಟ್ಟಿದ್ದ. ಪ್ರಮುಖವಾಗಿ ಕದ್ರಿ ದೇವಸ್ಥಾನಕ್ಕೆ ಬಾಂಬ್ ಇಡುವ ಪ್ಲಾನ್ ಇತ್ತು. ಇದು ಮಿಸ್ಸಾದ್ರೆ ಬೇರೆ ಕಡೆ ಇಡುವ ಪ್ಲಾನ್ ಹೊಂದಿದ್ದ. ಇನ್ನು ಇಷ್ಟೆಲ್ಲಾ ಅಂಶಗಳು ಪೊಲೀಸರು ಮತ್ತು ಎನ್.ಐ.ಎ ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ತಿಳಿದು ಬಂದಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Wed, 22 March 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ