ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಸಿಸಿಬಿ ಪೊಲೀಸರು

ಬಂಧಿಸಲು ಮುಂದಾದ ಪೊಲೀಸರ ಮೇಲೆಯೇ​ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಟೋರಿಯಸ್ ರೌಡಿಶೀಟರ್ ಆಕಾಶ್‌ಭವನ್‌ ಶರಣ್ ಎಂಬಾತನನ್ನು ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಲಿಗೆ ಗುಂಡೇಟು ಬಿದ್ದಿದ್ದರಿಂದ ಶರಣ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಮಂಗಳೂರು ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಸಿಸಿಬಿ ಪೊಲೀಸರು
ಮಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಸಿಸಿಬಿ ಪೊಲೀಸರು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Jan 09, 2024 | 7:37 PM

ಮಂಗಳೂರು, ಜ.9: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿಶೀಟರ್​ ಕಾಲಿಗೆ ಸಿಸಿಬಿ (CCB) ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಜೆಪ್ಪು ಕುಡ್ಪಾಡಿ ಬಳಿ ನಡೆದಿದೆ. ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಾಗ ಹಿನ್ನೆಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಮಲ್ಪೆಯಲ್ಲಿ ತನ್ನ ಸ್ನೇಹಿತನ ರೂಮ್​ನಲ್ಲಿ ಶರಣ್ ನೆಲೆಸಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕಾರ್ಯಾರಣೆ ನಡೆಸಿದ್ದಾರೆ. ಮಾಹಿತಿ ತಿಳಿದ ಶರಣ್, ಮಲ್ಪೆಯಿಂದ ತಪ್ಪಿಸಿಕೊಂಡಿದ್ದನು. ಈತನಿಗೆ ಆಶ್ರಯ ಕೊಟ್ಟ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರಿಗೆ ಶರಣ್ ಬಿಳಿ ಬಣ್ಣದ ಐ10 ಕಾರಿನಲ್ಲಿ ತೆರಳಿದ್ದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ಬಳಿಕ ಹೆಜಮಾಡಿ ಟೋಲ್ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಶರಣ್​ನನ್ನು ಚೇಸ್ ಮಾಡಿದಾಗ ಮಂಗಳೂರಿನ ಪಂಪ್ ವೆಲ್ ಬಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ಇಲ್ಲಿಂದಲೂ ಕಾರು ಮೂಲಕ ತಪ್ಪಿಸಿಕೊಂಡ ಶರಣ್, ಜೆಪ್ಪು ಕುಡುಪಾಡಿ ರಸ್ತೆಯ ಖಾಸಗಿ ಜಾಗದಲ್ಲಿ ಕಾರು ನಿಲ್ಲಿಸಿದಾಗ ಎಂಟು ಸಿಸಿಬಿ ಪೊಲೀಸರು ಸುತ್ತವರಿದಿದ್ದಾರೆ.

ಈ ವೇಳೆ ಹಿಡಿಯಲು ಬಂದ ಕಾನ್ಸ್‌ಟೇಬಲ್ ಪ್ರಕಾಶ್ ಮೇಲೆ ಶರಣ್ ಚೂರಿಯಿಂದ ದಾಳಿ ನಡೆಸಿದಾಗ ಸಿಬ್ಬಂದಿ ಪ್ರಾಣ ರಕ್ಷಣೆಗಾಗಿ ಪಿಎಸ್​ಐ ಸುದೀಪ್ ಅವರು ಶರಣ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಕುಸಿದುಬಿದ್ದ ಶರಣ್​ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಫಾರೆನ್ಸಿಕ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸಿಸಿಬಿ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಶರಣ್ ವಿರುದ್ಧ ಕೊಲೆ, ಕೊಲೆ ಯತ್ನ, ಪೋಕ್ಸೋ ಸೇರಿದಂತೆ 21ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?