ಮಂಗಳೂರಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ: ಮತ್ತೆ ಆತಂಕ
ಮಂಗಳೂರಿನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಆ ಮೂಲಕ ಮತ್ತೆ ಆತಂಕ ಉಂಟಾಗಿದೆ. ಮದುವೆ ವಿಚಾರಕ್ಕೆ ಗಲಾಟೆ ನಡೆದು ಸಂಬಂಧಿಯಿಂದಲೇ ವ್ಯಕ್ತಿಯ ಕೊಲೆ ಮಾಡಲಾಗಿದೆ. ಸದ್ಯ ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು, ಮೇ 23: ಮದುವೆ (marriage) ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ (kill) ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೇಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸುಲೇಮಾನ್ನ ಇಬ್ಬರ ಪುತ್ರರಾದ ರಿಯಾಬ್, ಸಿಯಾಬ್ ಮೇಲೂ ಹಲ್ಲೆ ನಡೆಸಿ ಪರಾರಿ ಆಗಿದ್ದ ಮುಸ್ತಾಫನನ್ನು ಕೆಲವೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಂಬಂಧಿ ಮುಸ್ತಫ ಎಂಬವರ ಮದುವೆಯನ್ನು ಸುಲೇಮಾನ್ ನೆರವೇರಿಸಿದ್ದ. ಇವರಿಬ್ಬರ ನಡುವೆ ಮದುವೆ ಸಂದರ್ಭದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರವಾಗಿ ಮುಸ್ತಫ ಜೊತೆ ಮಾತುಕತೆಗೆ ತನ್ನ ಇಬ್ಬರು ಪುತ್ರರೊಂದಿಗೆ ಸುಲೇಮಾನ್ ಬಂದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಸುಲೇಮಾನ್ಗೆ ಮುಸ್ತಫ ಚೂರಿಯಿಂದ ಇರಿದಿದ್ದಾನೆ.
ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್: ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಆರೋಪಿ
ಗಂಭೀರವಾಗಿ ಗಾಯಗೊಂಡಿದ್ದ ಸುಲೇಮಾನ್ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಮುಸ್ತಫನನ್ನು ಪೊಲೀಸರು ಬಂಧಿಸಿದ್ದಾರೆ.
ರಕ್ತಕಾರಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರ್ಮಿಕ ಸಾವು
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮರುಕುಂಟೆ ಮರುಕುಂಟೆ ಗ್ರಾಮ ಕೆರೆ ಕಾಮಗಾರಿ ವೇಳೆ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಓರ್ವ ರಕ್ತಕಾರಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೆಂಚಪ್ಪ ತಂದೆ ರಾಮಚಂದ್ರಪ್ಪ(52) ಸಾವನ್ನಪ್ಪಿದ ಕೂಲಿ ಕಾರ್ಮಿಕ.
ಮೃತ ರಾಮಚಂದ್ರಪ್ಪ, ಜಗಳೂರು ತಾಲೂಕಿನ ಪಲ್ಲಾಘಟ್ಟೆ ಗ್ರಾಮದ ನಿವಾಸಿ. ಕೂಲಿ ಕೆಲಸ ಮಾಡುವ ವೇಳೆ ಇದ್ದಕ್ಕಿದ್ದಂತೆ ರಕ್ತಕಾರಿ ಸಾವನ್ನಪ್ಪಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಕೂಲಿ ಮಾಡುವರಿಗೆ ಕುಡಿಯುವ ನೀರು ಹಾಗೂ ವೈದ್ಯಕೀಯ ಸೌಲಭ್ಯ ವಹಿಸಬೇಕಾದ ಅಧಿಕಾರಿಗಳು ನಾಪತ್ತೆ ಆಗಿದ್ದಾರೆ.
ಇದನ್ನೂ ಓದಿ: ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ, ಇದ್ದ ಕೆಲಸವನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾದ ಜನ
ಇತ್ತ ರಾಮಚಂದ್ರಪ್ಪರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪಲ್ಲಾಘಟ್ಟೆ ಪಂಚಾಯಿತ ಪಿಡಿಓ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಬಿಳಿಚೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:33 am, Fri, 23 May 25



