AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಹೂಡಿಕೆ ಹೆಸರಲ್ಲಿ ವಂಚನೆ: 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಮಂಗಳೂರಿನಲ್ಲಿ ಸೈಬರ್ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 43 ವರ್ಷದ ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಯಲ್ಲಿ 2 ಕೋಟಿ ರೂ.ಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ವಾಟ್ಸಾಪ್ ಮೂಲಕ ಸಂಪರ್ಕಕ್ಕೆ ಬಂದ ವಂಚಕರು, ದುಪ್ಪಟ್ಟು ಹಣದ ಆಮಿಷವೊಡ್ಡಿ ವ್ಯಕ್ತಿಯನ್ನು ನಂಬಿಸಿದ್ದರು. ನೊಂದ ವ್ಯಕ್ತಿ ತಮ್ಮ ಮತ್ತು ಕುಟುಂಬದವರ ಖಾತೆಗಳಿಂದ ಹಣ ವರ್ಗಾಯಿಸಿದ್ದು, ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆನ್‌ಲೈನ್ ಹೂಡಿಕೆ ಹೆಸರಲ್ಲಿ ವಂಚನೆ: 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಆನ್‌ಲೈನ್ ಹೂಡಿಕೆ ಹೆಸರಲ್ಲಿ 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಭಾವನಾ ಹೆಗಡೆ
|

Updated on: Nov 12, 2025 | 9:40 AM

Share

ಮಂಗಳೂರು, ನವೆಂಬರ್ 12: ರಾಜ್ಯದಲ್ಲೆಡೆ ಸೈಬರ್ ವಂಚಕರ (Cyber Fraud)  ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಜನರು ಕೋಟ್ಯಾಂತರ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿಯೂ ಸೈಬರ್ ವಂಚನೆ ನಡೆದಿದ್ದು, ಆನ್‌ಲೈನ್ ಹೂಡಿಕೆ ವಂಚನೆಯದಲ್ಲಿ 43 ವರ್ಷದ ವ್ಯಕ್ತಿಯೊಬ್ಬರು 2 ಕೋಟಿ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ವಂಚಕ ತಾನು ಕಂಪನಿಯೊಂದರ ಪ್ರತಿನಿಧಿಯೆಂದು ನಂಬಿಸಿ ಮೋಸ ಮಾಡಿದ್ದು, ಸಿಟಿ ಸಿಇಎನ್ (CEN) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಪ್ಪಟ್ಟು ಹಣದ ಆಮಿಷವೊಡ್ಡಿ ಮೋಸ

ನೊಂದ ವ್ಯಕ್ತಿಯ ದೂರಿನ ಪ್ರಕಾರ, 2022ರ ಮೇ 1ರಂದು ಅಂಕಿತ್ ಎಂಬ ವ್ಯಕ್ತಿಯಿಂದ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ತಾನು ಒಂದು ಕಂಪನಿಯ ಪ್ರತಿನಿಧಿಯಾಗಿ ಕೆಲಸ ಮಾಡತ್ತಿದ್ದೇನೆಂದು ಅಂಕಿತ್ ಹೇಳಿದ್ದ. ತನ್ನ ಮೂಲಕ ಯಾವುದೇ ಹೂಡಿಕೆ ಮಾಡಿದರೂ ದುಪ್ಪಟ್ಟು ಹಣ ಪಡೆಯಬಹುದೆಂದು ಭರವಸೆ ನೀಡಿದ್ದ ಎಂದು ತಿಳಿದುಬಂದಿದೆ. ಅಂಕಿತ್ ತನ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್ ಮತ್ತು ಅಖಿಲ್ ಎನ್ನುವವರನ್ನು ದೂರುದಾರರಿಗೆ ಪರಿಚಯಿಸಿ, ಈ ಮೂವರು ವಿದೇಶಿ ಹೂಡಿಕೆಗಳನ್ನು ನಿರ್ವಹಿಸುತ್ತಾರೆಂದೂ, ಇವರಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದೆಂದೂ ಹೇಳಿದ್ದ.

ಸಂಬಂಧಿಕರ ಖಾತೆಯಿಂದಲೂ ಹಣ ವರ್ಗಾವಣೆ

ವಂಚಕರ ಮಾತನ್ನು ನಂಬಿದ್ದ ವ್ಯಕ್ತಿಗೆ ಅಂಕಿತ್ ವಾಟ್ಸಾಪ್ ಕರೆಯ ಮೂಲಕ ಹೂಡಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ವಂಚನೆಯಿಂದ ಮುಕ್ತವಾಗಿದೆ ಎಂದು ಇನ್ನೊಮ್ಮೆ ಭರವಸೆ ನೀಡಿದ್ದ. ಈ ಜಾಲಕ್ಕೆ ಸಿಲುಕಿದ ದೂರುದಾರರು ಆರಂಭದಲ್ಲಿ ಅಂಕಿತ್ ಒದಗಿಸಿದ QR ಕೋಡ್​ಗೆ  3,500 ರೂಗಳನ್ನು ವರ್ಗಾಯಿಸಿದ್ದರು. ಶೀಘ್ರದಲ್ಲೇ ಲಾಭವಾಗಿ 1,000 ರೂ.ಗಳನ್ನು ಪಡೆದಿದ್ದರು.

ಶೀಘ್ರ ಲಾಭದಿಂದ ಉತ್ತೇಜಿತರಾದ ಇವರು ದೊಡ್ಡ ಮೊತ್ತವನ್ನು ಹೂಡಿಕೆ ಮಾಡಲು ಪ್ರಾರಂಭಿಸಿದ್ದರು. ಕೇವಲ ತಮ್ಮ ಬ್ಯಾಂಕ್ ಖಾತೆಯಿಂದಷ್ಟೇ ಅಲ್ಲದೇ ಅವರ ಚಿಕ್ಕಪ್ಪ, ಹೆಂಡತಿ ಮತ್ತು ಸೊಸೆಯ ಬ್ಯಾಂಕ್ ಖಾತೆಯಿಂದಲೂ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿದ್ದರು. ಇದೇ ರೀತಿ ಮೇ 2022 ರಿಂದ 29 ಆಗಸ್ಟ್ 2025 ರ ನಡುವೆ UPI ಮತ್ತು IMPS ವಹಿವಾಟುಗಳ ಮೂಲಕ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ 2 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ಕಳುಹಿಸಿದ್ದರೆಂದು ಹೇಳಲಾಗಿದೆ.

ಇದನ್ನೂ ಓದಿ ಡೇಟಿಂಗ್ ಆ್ಯಪ್ ನಂಬಿ ರೂ.1.29 ಕೋಟಿಗೂ ಹೆಚ್ಚು ಹಣ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

ಕೊಲೆ ಬೆದರಿಕೆಯೊಡ್ಡಿದ್ದ ವಂಚಕರ

ಕಳೆದ ಕೆಲ ತಿಂಗಳುಗಳಿಂದ ಈ ನಾಲ್ವರೂ ದೂರುದಾರರನ್ನು ಸಂಪರ್ಕಿಸಿರಲಿಲ್ಲ. ದೂರುದಾರರು ನಿರಂತರವಾಗಿ ಸಂಪರ್ಕಿಸಲು ಪ್ರಯತ್ನ ಪಟ್ಟಾಗ ಕೊನೆಗೂ ಅಂಕಿತ್​ನಿಂದ ಸಂದೇಶ ಬಂದಿತ್ತು. ಆತ ಉಳಿದ ಮೂವರಿಂದ ತನಗೆ ಮೋಸವಾಗಿದೆ, ತಾನು ಈಗಾಗಲೇ ಅವರೊಂದಿಗೆ ಸಂಪರ್ಕವನ್ನು ಕಡಿತಗೊಳಿಸಿದ್ದೇನೆಂದು ಹೇಳಿದ್ದ. ಇದೇ ವೇಳೆ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್ ಮತ್ತು ಅಖಿಲ್ ಈ ಮೂವರೂ ದೂರುದಾರರಿಗೆ ಕರೆ ಮಾಡಿ, ಪೊಲೀಸರನ್ನು ಸಂಪರ್ಕಿಸದಂತೆ ಕೊಲೆ ಬೆದರಿಕೆಯನ್ನೂ ಹಾಕಿದ್ದರು. ಇದರಿಂದ ಗಾಬರಿಗೊಂಡ ದೂರುದಾರರು ತಮ್ಮ ಕುಟುಂಬದವರಿಗೆ ವಿಷಯ ತಿಳಿಸಿ ನಂತರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?